ETV Bharat / state

ನಾಳೆ ರಾಜ್ಯಕ್ಕೆ ಅಮಿತ್ ಶಾ ಆಗಮನ, ಪಕ್ಷ ಸಂಘಟನೆ ಕಾರ್ಯಕ್ರಮಗಳಲ್ಲಿ ಭಾಗಿ: ಅಶ್ವತ್ಥನಾರಾಯಣ

ಪಕ್ಷ ಸಂಘಟನೆಗಾಗಿ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದರು.

Higher Education Minister Dr CN Aswatthanarayan
ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವತ್ಥನಾರಾಯಣ
author img

By

Published : Dec 28, 2022, 10:37 PM IST

ಬೆಳಗಾವಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ಮೂರು ದಿನಗಳ ಕಾಲ ದಕ್ಷಿಣ ಕರ್ನಾಟಕದಲ್ಲಿ ಪಕ್ಷ ಸಂಘಟನೆಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಸುವರ್ಣ ಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಡ್ಯದಲ್ಲಿ ಶುಕ್ರವಾರ ನಡೆಯಲಿರುವ ಜನಸಂಕಲ್ಪ ಯಾತ್ರೆಯಲ್ಲಿ ಅಮಿತ್​ ಶಾ ಭಾಗವಹಿಸಲಿದ್ದಾರೆ. ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದಿಂದ ಶಾಸಕರು ಆಯ್ಕೆಯಾಗಬೇಕು ಎಂಬುದು ವರಿಷ್ಠರ ಗುರಿ. ಈ ವಿಷಯ ಬಿಟ್ಟು ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಬಗ್ಗೆ ಯಾವ ಚರ್ಚೆಯೂ ನಡೆಯುವುದಿಲ್ಲ. ಇದು ಚುನಾವಣಾ ಆಯೋಗಕ್ಕೆ ಸಂಬಂಧಪಟ್ಟ ವಿಷಯ ಎಂದು ತಿಳಿಸಿದರು.

ದಕ್ಷಿಣದ ಅಯೋಧ್ಯೆಯಾಗಿ ರಾಮದೇವರ ಬೆಟ್ಟ: ರಾಮನಗರದ ರಾಮದೇವರ ಬೆಟ್ಟದಲ್ಲಿ ಅಯೋಧ್ಯೆಯ ಮಾದರಿಯಲ್ಲಿ ರಾಮಮಂದಿರ ನಿರ್ಮಿಸುವ ಆಲೋಚನೆ ಇದೆ. ಮುಂಬರುವ ರಾಜ್ಯ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಹೊರಬೀಳಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಮದೇವರ ಬೆಟ್ಟವನ್ನು ಅಯೋಧ್ಯೆಯಂತೆ ಅಭಿವೃದ್ಧಿಪಡಿಸಬೇಕೆಂಬುದು ಅಲ್ಲಿನ ಜನರ ಭಾವನೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ರಾಮದೇವರ ಬೆಟ್ಟ ಜೀರ್ಣೋದ್ಧಾರದಲ್ಲಿ ಪಾಲ್ಗೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: ರಾಮನಗರದ ರಾಮದೇವರ ಬೆಟ್ಟದಲ್ಲಿ ಅಯೋಧ್ಯೆ ಕ್ಷೇತ್ರ ನಿರ್ಮಾಣ: ಸಚಿವ ಅಶ್ವತ್ಥನಾರಾಯಣ

ಮಂಡ್ಯ ಜಿಲ್ಲೆ ಅಭಿವೃದ್ಧಿ ಕುಂಠಿತಕ್ಕೆ ಜೆಡಿಎಸ್, ಕಾಂಗ್ರೆಸ್ ಕಾರಣ: ಒಂದು ಕಾಲದಲ್ಲಿ ಅಭಿವೃದ್ಧಿಯಲ್ಲಿ ಮುಂದಿದ್ದ ಮಂಡ್ಯ ಜಿಲ್ಲೆಯು ಹಿಂದೆ ಬೀಳುವುದಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರಣ. ಆ ಎರಡೂ ಪಕ್ಷಗಳನ್ನು ಮೂಲೋತ್ಪಾಟನೆ ಮಾಡುವುದು ಅನಿವಾರ್ಯವಾಗಿದೆ. ಮೈಶುಗರ್ ಕಾರ್ಖಾನೆಯನ್ನು ಈ ಎರಡೂ ಪಕ್ಷಗಳ ಸರ್ಕಾರಗಳು ಸರಿಯಾಗಿ ನಿರ್ವಹಣೆ ಮಾಡದೇ ಇದ್ದುದರಿಂದ ಇಂದು ರೈತರು ಸಮಸ್ಯೆಗೆ ಸಿಲುಕಿದ್ದಾರೆ. ಮಂಡ್ಯ ಜಿಲ್ಲೆಯ ಅಗತ್ಯಗಳನ್ನು ಮನಗಂಡು ನಮ್ಮ ಸರ್ಕಾರವು ಮೂಲ ಸೌಕರ್ಯ ಒದಗಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಡಿ.30, 31ರಂದು ಅಮಿತ್ ಶಾ ರಾಜ್ಯ ಪ್ರವಾಸ: ಕಾರ್ಯಕ್ರಮಗಳ ವಿವರ ಇಲ್ಲಿದೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.