ETV Bharat / state

ದಿ. ಸುರೇಶ್​​ ಅಂಗಡಿ ಮನೆಗೆ ಅಮಿತ್ ಶಾ ಭೇಟಿ; ಕುಟುಂಬ ವರ್ಗದವರಿಗೆ ಸಾಂತ್ವನ

ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ಅವರ ಮನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

amit-shah-visits-the-suresh-angadi-home
ಸುರೇಶ್​​ ಅಂಗಡಿ ಮನೆಗೆ ಅಮಿತ್ ಶಾ ಭೇಟಿ
author img

By

Published : Jan 17, 2021, 4:59 PM IST

Updated : Jan 17, 2021, 5:14 PM IST

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ ಅಂಗಡಿಯವರ ನಿವಾಸ "ಸ್ಫೂರ್ತಿ" ಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದರು.

ಸುರೇಶ ಅಂಗಡಿಯವರ ಭಾವಚಿತ್ರಕ್ಕೆ ನಮನ ಅರ್ಪಿಸಿದ ಅವರು, ಸುರೇಶ ಅಂಗಡಿಯವರು ಉತ್ತಮ ವ್ಯಕ್ತಿತ್ವ ಹೊಂದಿದ್ದರು. ಅಂಗಡಿಯವರ ನಿಧನ ದೇಶಕ್ಕೆ ದೊಡ್ಡ ನಷ್ಟ ಉಂಟುಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು. ಸುರೇಶ ಅಂಗಡಿಯವರು ಕೋವಿಡ್​ನಿಂದ ಬಳಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ತಾವೂ ಸಹ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದನ್ನು ಸಚಿವ ಶಾ ಇದೇ ಸಂದರ್ಭದಲ್ಲಿ ಸ್ಮರಿಸಿಕೊಂಡರು.

ಸುರೇಶ್​​ ಅಂಗಡಿ ಮನೆಗೆ ಅಮಿತ್ ಶಾ ಭೇಟಿ

ಅಂಗಡಿಯವರ ಧರ್ಮಪತ್ನಿ ಮಂಗಲ್ ಅಂಗಡಿ, ಪುತ್ರಿಯರಾದ ಸ್ಫೂರ್ತಿ, ಶ್ರದ್ಧಾ, ಅಳಿಯಂದಿರಾದ ಡಾ. ರಾಹುಲ್ ಪಾಟೀಲ, ಸಂಕಲ್ಪ ಶೆಟ್ಟರ್, ಕಿರಿಯ ಸಹೋದರ ಮೋಹನ ಚ. ಅಂಗಡಿಯವರಿಗೆ ಸಾಂತ್ವನ ಹೇಳಿದರು. ಅನಾರೋಗ್ಯದ ಹಿನ್ನೆಲೆ ಅಂಗಡಿಯವರ ತಾಯಿ ಸೋಮವ್ವ ಅಂಗಡಿಯವರು ನಾಗೇರಹಾಳದ (ಕೊಂಡಸಕೊಪ್ಪ) ನಿವಾಸದಲ್ಲಿದ್ದರು‌.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ರಾಜ್ಯ ಉಸ್ತುವಾರಿ ಅರುಣಸಿಂಗ್, ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​, ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್​ ಜೋಷಿ, ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ ಶೆಟ್ಟರ್, ಶಾಸಕ ಅನಿಲ ಬೆನಕೆ ಉಪಸ್ಥಿತರಿದ್ದರು.

ಬಿಗಿಭದ್ರತೆ-ಕುಟುಂಬ ವರ್ಗದ ಸದಸ್ಯರಿಗೆ ಮಾತ್ರ ಅವಕಾಶ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆ ದಿ. ಸುರೇಶ ಅಂಗಡಿ ನಿವಾಸಕ್ಕೆ ತಲುಪುವ ಎಲ್ಲ ಮಾರ್ಗಗಳಲ್ಲಿ ತೀವ್ರ ಬಿಗಿ, ಭದ್ರತೆ ಏರ್ಪಡಿಸಲಾಗಿತ್ತು. ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆಹಾರ ಸುರಕ್ಷತಾ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಉಪಹಾರ ಸಿದ್ಧಪಡಿಸಲಾಗಿತ್ತು.

ಓದಿ: ಕಾರ್ಯಕ್ರಮ ಕರ್ನಾಟಕದಲ್ಲಿ ನಡೆದಿದೆ, ಕನ್ನಡ ಇರಲೇಬೇಕಿತ್ತು, ಇಲ್ಲದಿರೋದು ಅಪರಾಧ- ಸಿದ್ದರಾಮಯ್ಯ

Last Updated : Jan 17, 2021, 5:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.