ಚಿಕ್ಕೋಡಿ: ಕೊರೊನಾಗೆ ವೃದ್ಧನೊಬ್ಬ ಸಾವನ್ನಪ್ಪಿರುವ ಘಟನೆ ಕಾಗವಾಡದಲ್ಲಿ ನಡೆದಿದೆ.
60 ವರ್ಷದ ವೃದ್ಧ ಜುಲೈ 10ರಂದು ತೀವ್ರ ಉಸಿರಾಟದ ಸಮಸ್ಯೆ ಹಾಗೂ ಜ್ವರದ ಹಿನ್ನೆಲೆಯಲ್ಲಿ ಅಥಣಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿತ್ತು.
ಬೆಳಗಾವಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಲಾಗಿದ್ದು, ವೈರಸ್ ಇರುವುದು ಧೃಡವಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಸಾವನ್ನಪ್ಪಿದ್ದಾನೆ.