ಚಿಕ್ಕೋಡಿ: ಪ್ರಕಾಶ ಹುಕ್ಕೇರಿ ವಿರುದ್ಧ ಒಂದು ಲಕ್ಷ ಮತಗಳ ಅಂತರದಿಂದ ಜಯ ಖಂಡಿತ ಸಾಧಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.
ಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಬಂಡಾಯವಿಲ್ಲ ಒಗ್ಗಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಈ ಬಾರಿ ಭಾರತೀಯ ಜನತಾ ಪಕ್ಷ ನರೇಂದ್ರ ಮೋದಿ ನೇತೃತ್ವದ ಚುನಾವಣೆಯಲ್ಲಿ ಸ್ಥಳೀಯ ಶಾಸಕರ ಬೆಂಬಲದಿಂದ ಒಂದು ಲಕ್ಷ ಮತಗಳ ಅಂತರದಿಂದ ವಿಜಯಶಾಲಿಯಾಗುತ್ತೇನೆ ಎಂದು ಅಣ್ಣಾಸಾಹೇಬ ವಿಶ್ವಾಸ ವ್ಯಕ್ತಪಡಿಸಿದರು.