ಬೆಳಗಾವಿ : ಕೋವಿಡ್-19 ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದರು.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ - 226, ರಾಯಬಾಗ ತಾಲೂಕಿನ ಕುಡಚಿಯ 25 ವರ್ಷದ ವ್ಯಕ್ತಿಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು ಎಂದು ಹೇಳಿದರು.
ಇವರು ಏ.12 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 55 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಪೈಕಿ ಏಳು ಜನರನ್ನು ಈಗಾಗಲೇ ಸರ್ಕಾರದ ಮಾರ್ಗಸೂಚಿಯನ್ವಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದೀಗ ಒಟ್ಟಾರೆ 8 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.