ಬೆಳಗಾವಿ : ಗಡಿ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಜಿಲ್ಲೆಯಲ್ಲಿಂದು ಓರ್ವನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕು ತಗುಲಿದ ಈ ವ್ಯಕ್ತಿ ದೆಹಲಿಯಲ್ಲಿ ನಡೆದ ಧರ್ಮಸಭೆಯಲ್ಲಿ ಪಾಲ್ಗೊಂಡು ಮರಳಿದ್ದನು ಎಂಬ ಮಾಹಿತಿ ಇದೆ.
ಬೆಳಗಾವಿ ಹೊರವಲಯದ ಪೀರನವಾಡಿ ಗ್ರಾಮದ 33 ವರ್ಷ ವಯಸ್ಸಿನ ವ್ಯಕ್ತಿಗೆ ಸೋಂಕು ತಗುಲಿದೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.