ಅಥಣಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಪ್ರಯುಕ್ತ ಪಟ್ಟಣದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಜಾಗೃತಿ ಅಭಿಯಾನಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರವಿ ಬಂಗಾರಪ್ಪನವರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, 14 ವರ್ಷ ಕೆಳಗಿನ ಮಕ್ಕಳನ್ನು ಶಾಲೆ ಬಿಡಿಸಿ ಕಾರ್ಮಿಕರಾಗಿ ಬಳಕೆ ಮಾಡುವುದು ಕಾನೂನು ಪ್ರಕಾರ ಅಪರಾಧ. ಚಿಕ್ಕ ಮಕ್ಕಳನ್ನು ಕೆಲಸಕ್ಕೆ ಬಳಕೆ ಮಾಡಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ಮತ್ತು 50 ಸಾವಿರದವರೆಗೆ ದಂಡ ವಿಧಿಸಲಾಗುತ್ತದೆ ಎಂದರು.
ಕಾರ್ಮಿಕ ಇಲಾಖೆ ಅಥಣಿ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ನ್ಯಾಯವಾದಿಗಳ ಸಂಘ ಅಥಣಿ, ನಗರಾಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ತಾಲೂಕು ಆಡಳಿತ ಅಥಣಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಜಾಗೃತಿ ಅಭಿಯಾನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಅರಿವು ಮೂಡಿಸಿತು.