ಅಥಣಿ: ಕಳೆದ ಬಾರಿ ಕೃಷ್ಣಾ ನದಿಪಾತ್ರದ ಗ್ರಾಮಗಳ ನೆರೆ ಸಂತ್ರಸ್ತರ ಪರಿಹಾರ ಹಾಗೂ ಸರ್ವೇ ಕಾರ್ಯದಲ್ಲಿ ತಾರತಮ್ಯ ಖಂಡಿಸಿ, ತಂಗಡಿ ಗ್ರಾಮದ ಜನರು ಅಥಣಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ನೆರೆ ಪರಿಹಾರ ಹಾಗೂ ಸರ್ವೆ ಕಾರ್ಯದಲ್ಲಿ ತಾರತಮ್ಯ ಹಾಗೂ ನಿಜವಾದ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಈ ವೇಳೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ಉಪಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ನಮಗೆ ಸರ್ಕಾರದಿಂದ ಪರಿಹಾರ ಕೊಡಿಸಿ ಎಂದು ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಂತ್ರಸ್ತ ಮಹದೇವಪ್ಪ, 2019 ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಪ್ರವಾಹಕ್ಕೆ ನಮ್ಮ ಮನೆಗಳು ಮುಳುಗಿ ಬಿದ್ದು ಹಾಳಾಗಿ ನಾವೆಲ್ಲಾ ಬೀದಿ ಪಾಲಾಗಿದ್ದೇವೆ. ಸರ್ಕಾರ ನಿಜವಾದ ಮನೆ ಬಿದ್ದವರಿಗೆ ಪರಿಹಾರ ಕೊಟ್ಟಿಲ್ಲ, ಬದಲಾಗಿ ಮನೆ ಬೀಳದವರಿಗೆ ಪರಿಹಾರ ಕೊಟ್ಟಿದ್ದಾರೆ ಎಂದು ಆರೋಪಿಸಿದರು.