ಬೆಳಗಾವಿ: ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ರೂ.ಗಳಿಗೆ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜು.29 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂಬ ವಿಷಯದ ಕುರಿತು ಆಶಾ ಕಾರ್ಯಕರ್ತೆಯರಿಂದ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವದ ಹಂಗು ತೊರೆದು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಈಗಾಗಲೇ ಜು.10 ರಿಂದ ಕರ್ತವ್ಯಕ್ಕೆ ಹಾಜರಾಗದೇ ಪ್ರತಿಭಟನೆಗೆ ಮುಂದಾಗಿದ್ದರು. ಇದೀಗ ಮತ್ತೆ ಜು.29 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ.
ಈ ಸಂಬಂಧ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.