ಬೆಳಗಾವಿ: ಗಡಿನಾಡು ಬೆಳಗಾವಿ ಸೇರಿದಂತೆ ಸುತ್ತಲಿನ ಜಿಲ್ಲೆಗಳಲ್ಲಿ ಬಿಡುವಿಲ್ಲದೇ ಸುರಿಯುತ್ತಿರುವ ಮಳೆಯಿಂದಾಗಿ ಭೀಕರ ಪ್ರವಾಹ ಸಂಭವವಿಸಿದೆ. ನೆರೆ ಸಂತ್ರಸ್ತರ ರಕ್ಷಣೆಗಾಗಿ ಸೇನಾ ಹೆಲಿಕಾಪ್ಟರ್ ಕಾರ್ಯಾಚರಣೆ ಆರಂಭಿಸಿದೆ.
ಇನ್ನು ಹಡಗಿನಾಲದಲ್ಲಿ 14 ಜನರು ಪ್ರವಾಹದಲ್ಲಿ ಸಿಲುಕಿದ್ದರು. ಅದರಲ್ಲಿ 7 ಜನರನ್ನು ಎನ್ಡಿಆರ್ಎಫ್ ತಂಡ ರಕ್ಷಿಸಿದ್ರೆ, ಇನ್ನುಳಿದ 7 ಜನರನ್ನು ಸೇನಾ ಹೆಲಿಕಾಪ್ಟರ್ ಮೂಲಕ ಏರ್ಲಿಫ್ಟ್ ಮಾಡಲಾಯಿತು.
ಬಳಿಕ ಎಲ್ಲಾ ಸಂತ್ರಸ್ತರನ್ನು ಬೆಳಗಾವಿಯ ಪರಿಹಾರ ಕೇಂದ್ರಕ್ಕೆ ರವಾನಿಸಲಾಯಿತು.