ETV Bharat / state

ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ, ಬಸವಣ್ಣನಿಗೆ ಅಪಮಾನ ಮಾಡಿದ ಮೂವರು ಆರೋಪಿಗಳ ಬಂಧನ

ಖಾನಾಪುರದ ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟು, ಬಸವಣ್ಣನಿಗೆ ಅವಮಾನ ಮಾಡಿದ ಮೂವರು ಆರೋಪಿಗಳನ್ನು ನಂದಗಡ ಪೊಲೀಸರು ಬಂಧಿಸಿದ್ದಾರೆ.

ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ
ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ
author img

By

Published : Dec 21, 2021, 9:45 AM IST

ಬೆಳಗಾವಿ: ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ ಮೂವರು ಆರೋಪಿಗಳನ್ನು ನಂದಗಡ ಪೊಲೀಸರು ಬಂಧಿಸಿದ್ದಾರೆ. ಖಾನಾಪುರದ ಹಲಸಿ ಗ್ರಾಮ ಪಂಚಾಯತ್ ಆವರಣದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಬಳಿಕ ಬಸವಣ್ಣನವರ ಮೂರ್ತಿಗೆ ಕಪ್ಪು ಮಸಿ ಬಳಿದಿದ್ದರು.

ಇದನ್ನೂ ಓದಿ: ಪ್ರೀತಿಸಿ ವಿವಾಹವಾದ ಮಗಳು: ನಂಜನಗೂಡು ನೋಂದಣಿ ಕಚೇರಿಯಲ್ಲೇ ಜುಟ್ಟು ಹಿಡಿದು ಎಳೆದೊಯ್ಯಲು ಯತ್ನಿಸಿದ ತಂದೆ!

ಘಟನೆ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸಂಜು ಗುರವ್, ಸಚಿನ್ ಗುರವ್, ಗಣೇಶ ಪಡ್ನೇಕರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರ ಅಡಿಯಲ್ಲಿ ಕೇಸ್ ದಾಖಲಾಗಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.