ಚಿಕ್ಕೋಡಿ: ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿ ಬಾವಿಯಲ್ಲಿ ಸಂಗ್ರಹಿಸಿ ಇಟ್ಟಿದ್ದ ಜಿಲೆಟಿನ್ ಹಾಗೂ ಡಿಟೊನೇಟರ್ಗಳನ್ನು ಪೊಲೀಸರು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ನಿವಾಸಿ ಶಾಂತಿಲಾಲ ಗಣೇಶಲಾಲ ದುಗ್ಗರ ಹಾಗೂ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ನಿವಾಸಿ ತ್ಯಾಗರಾಜ ಸೋಮ ರಾಥೋಡ ಬಂಧಿತ ಆರೋಪಿಗಳು.
ಇವರು ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಕಲ್ಲಪ್ಪ ನಿಂಗಪ್ಪ ಸೂಜಿ ಇವರ ಬಾವಿಯಲ್ಲಿ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿದ್ದರು. ಈ ಕುರಿತು ಮಾಹಿತಿ ತಿಳಿದ ಚಿಕ್ಕೋಡಿ ಪಿಐ ರಾಕೇಶ್ ಬಗಲಿ ನೇತೃತ್ವದ ತಂಡ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.