ETV Bharat / state

ಬೇರೊಬ್ಬರ ಹೆಸರಿನಲ್ಲಿ ಪೊಲೀಸ್ ಪರೀಕ್ಷೆ ಬರೆಯುತ್ತಿದ್ದ ಇಬ್ಬರು ನಕಲಿ ಅಭ್ಯರ್ಥಿಗಳ ಬಂಧನ

ಡಿಎಆರ್/ಸಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ನೇಮಕಾತಿ ಪರೀಕ್ಷೆ ಬರೆಯುತ್ತಿದ್ದ ಇಬ್ಬರು ನಕಲಿ ಪರೀಕ್ಷಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

author img

By

Published : Oct 18, 2020, 7:56 PM IST

ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ನೇಮಕಾತಿ ಪರೀಕ್ಷೆ

ಬೆಳಗಾವಿ: ರಾಜ್ಯದಲ್ಲಿಂದು ನಡೆಯುತ್ತಿರೋ ಡಿಎಆರ್/ಸಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ನೇಮಕಾತಿ ಪರೀಕ್ಷೆಗೆ ಬೇರೆಯವರ ಹೆಸರಿನಲ್ಲಿ ಪರೀಕ್ಷೆ ಬರೆಯುತ್ತಿದ್ದ ಇಬ್ಬರು ನಕಲಿ ಪರೀಕ್ಷಾರ್ಥಿಗಳನ್ನು ಬಂಧಿಸಿ ವಶಕ್ಕೆ ಪಡೆಯಲಾಗಿದೆ.

ನಗರದ ವಸಂತರಾವ್ ಪೋತದಾರ್ ಪಾಲಿಟೆಕ್ನಿಕ್ ಮತ್ತು ಜೈನ್ ಪಾಲಿಟೆಕ್ನಿಕ್ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಾಗಿದ್ದ ತಲಾ ಒಬ್ಬರು ಬೇರೆ ಅಭ್ಯರ್ಥಿಗಳ ಹೆಸರಿನಲ್ಲಿ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಪರೀಕ್ಷಾ ಮೇಲ್ವೀಚಾರಕರ ಕೈಗೆ ಸಿಕ್ಕಾಕಿಕೊಂಡಿದ್ದಾರೆ. ಮೇಲ್ವೀಚಾರಕರ ಮಾಹಿತಿ ಮೇರೆಗೆ ಇಬ್ಬರು ನಕಲಿ ಅಭ್ಯರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ.

ಜಿಲ್ಲೆಯಲ್ಲಿಂದು ಇಂದು ನಡೆದ ಪೊಲೀಸ್ ನೇಮಕಾತಿ ಸಿಇಟಿ ಪರೀಕ್ಷೆಗೆ ಒಟ್ಟು 6909ರ ಅಭ್ಯರ್ಥಿಗಳ ಪೈಕಿ 5760 ಜನ ಅಭ್ಯರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.

ನಕಲಿ ಆಭ್ಯರ್ಥಿಗಳ ಮೇಲೆ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.