ಬೆಳಗಾವಿ: ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದರೂ ಜಿಲ್ಲೆಯ ಜನತೆ ಮಾತ್ರ ಬುದ್ಧಿ ಕಲಿಯುತ್ತಿಲ್ಲ. ಆಷಾಢ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೂವಿನ ಮಾರುಕಟ್ಟೆಯಲ್ಲಿ ಜನಜಂಗುಳಿ ನೆರೆದಿದೆ.
ಇಲ್ಲಿನ ಗಾಂಧಿ ನಗರದ ಹೋಲ್ ಸೇಲ್ ಹೂವಿನ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡು ಬಂತು. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ವ್ಯಾಪಾರಸ್ಥರು ಹಾಗೂ ಗ್ರಾಹಕರು ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದರು.
ಬೆಳಗಾವಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,013ಕ್ಕೆ ಏರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 26 ಮಂದಿ ಬಲಿಯಾಗಿದ್ದಾರೆ.