ಗೋಕಾಕ: ಗೋಕಾಕ ಮತಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಅಶೋಕ ಪೂಜಾರಿ ಮನೆಗೆ ಬೆಂಬಲಿಗರು ಮುತ್ತಿಗೆ ಹಾಕಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯದಂತೆ ಒತ್ತಡ ಹೇರುತ್ತಿದ್ದಾರೆ.
ನಿನ್ನೆಯಷ್ಟೇ ಬೆಂಬಲಿಗರ ಸಭೆ ಕರೆದು ಚರ್ಚಿಸಿದ್ದ ಅಶೋಕ ಪೂಜಾರಿ ಇಂದು ಸಂಜೆಯೊಳಗೆ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಕೇಂದ್ರ ಸಚಿವ ಸುರೇಶ ಅಂಗಡಿ ಮತ್ತು ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಸೇರಿದಂತೆ ಪಕ್ಷದ ಮುಖಂಡರು ಸಂಧಾನ ಮಾಡಲು ಪೂಜಾರಿ ಮನೆಗೆ ಆಗಮಿಸಿದ್ದರು.
ಕಾಂಗ್ರೆಸ್ ನಿನ್ನೆ ರಾತ್ರಿ ಲಖನ್ ಜಾರಕಿಹೊಳಿಗೆ ಟಿಕೆಟ್ ಘೋಷಣೆ ಮಾಡಿತ್ತು. ಹೀಗಾಗಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಪಕ್ಷೇತರ ಇಲ್ಲವೇ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬೆಂಬಲಿಗರು ಆಗ್ರಹಿಸಿದ್ದಾರೆ.