ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಎಎಸ್ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಯಮಕನಮರಡಿ ಪೊಲೀಸ್ ಠಾಣೆಯ ಎಎಸ್‌ಐ ಜಿ ಬಿ ಪೂಜಾರ್ (57) ಮೃತರು. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾದ ಕಾಲೇಜೊಂದರ ಶೌಚಗೃಹದಲ್ಲಿ ಎಎಸ್ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮತದಾನದ ಹಿನ್ನೆಲೆಯಲ್ಲಿ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಸೆಕ್ಟರ್ ಆಫೀಸರ್ ಆಗಿ ಎಎಸ್ಐ ಜಿ.ಬಿ ಪೂಜಾರ ನಿಯೋಜನೆಗೊಂಡಿದ್ದರು. ಗೋಕಾಕ್ ಮತಕ್ಷೇತ್ರದ ಘಟಪ್ರಭಾದ ಕಾಲೇಜಿನ ಮತಗಟ್ಟೆಗೆ ಭೇಟಿ ನೀಡಿದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಗೋಕಾಕ್ ತಾಲೂಕು ಆಸ್ಪತ್ರೆಗೆ ಶವ ಸಾಗಿಸಲಾಗಿದ್ದು, ಮರಣೋತ್ತರ ಪರಿಕ್ಷೆ ನಡೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಎಸ್ ಪಿ ಲಕ್ಷ್ಮಣ ನಿಂಬರಗಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.