ETV Bharat / state

ಎರಡು ವಿಧೇಯಕಗಳಿಗೆ ಅನುಮೋದನೆ ನೀಡಿದ ವಿಧಾನಸಭೆ - ಸಂಸದೀಯ ವ್ಯವಹಾರಗಳು

ಎರಡು ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಸಚಿವ ಹೆಚ್ ಕೆ ಪಾಟೀಲ್
ಸಚಿವ ಹೆಚ್ ಕೆ ಪಾಟೀಲ್
author img

By ETV Bharat Karnataka Team

Published : Dec 14, 2023, 9:26 PM IST

ಸಚಿವ ಹೆಚ್ ಕೆ ಪಾಟೀಲ್

ಬೆಂಗಳೂರು/ ಬೆಳಗಾವಿ : ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಅವರು ಮಂಡಿಸಿದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಎರಡನೇ ತಿದ್ದುಪಡಿ) ವಿಧೇಯಕ 2023 ಅನ್ನು ಮತ್ತು ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ 2023ನ್ನು ವಿಧಾನಸಭೆಯಲ್ಲಿ ಅನುಮೋದಿಸಲಾಯಿತು.

ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮಂಡಿಸಿದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ 2023ನ್ನು ಅಂಗೀಕರಿಸಲಾಯಿತು. ಈ ವಿಧೇಯಕಗಳು ವಿಧಾನಪರಿಷತ್‍ನಲ್ಲಿ ಚರ್ಚೆಗೆ ಬರಲಿವೆ. ಚರ್ಚೆ ಬಳಿಕ ಸ್ಪೀಕರ್ ಯು ಟಿ ಖಾದರ್ ಅವರು, ಧ್ವನಿಮತದ ಮೂಲಕ ಈ ವಿಧೇಯಕಗಳಿಗೆ ಅನುಮೋದನೆ ನೀಡಿದರು.

ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ವರದಿ ಮಂಡನೆ : ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಅವರು ರಾಜ್ಯ ಹಣಕಾಸಿನ ಮಧ್ಯವಾರ್ಷಿಕ 2023-24ನೇ ವರದಿ ಮಂಡಿಸಿದರು.

ಮೂರು ತಿದ್ದುಪಡಿ ವಿಧೇಯಕಗಳ ಮಂಡನೆ : 2023ನೇ ಸಾಲಿನ ಕರ್ನಾಟಕ ಸಿವಿಲ್ ನ್ಯಾಯಾಲಯಗಳ ತಿದ್ದುಪಡಿ ವಿಧೇಯಕ ಸೇರಿದಂತೆ 3 ತಿದ್ದುಪಡಿ ವಿಧೇಯಕಗಳನ್ನು ವಿಧಾನಸಭೆಯಲ್ಲಿ (ಡಿಸೆಂಬರ್ -12-23) ಮಂಡಿಸಲಾಗಿತ್ತು. ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಅವರು, 2023ನೇ ಸಾಲಿನ ಕರ್ನಾಟಕ ಉಚ್ಛ ನ್ಯಾಯಾಲಯ ತಿದ್ದುಪಡಿ ವಿಧೇಯಕ ಹಾಗೂ 2023ನೇ ಸಾಲಿನ ಕರ್ನಾಟಕ ಸಿವಿಲ್ ನ್ಯಾಯಾಲಯಗಳ ತಿದ್ದುಪಡಿ ವಿಧೇಯಕವನ್ನು ಸದನದಲ್ಲಿ ಮಂಡಿಸಿದ್ದರು.

ವಕೀಲರ ಸಂರಕ್ಷಣಾ ವಿಧೇಯಕ ಮಂಡನೆ : ವಕೀಲ ಸಮುದಾಯದ ಬಹುನಿರೀಕ್ಷಿತ ವಕೀಲರ ಸಂರಕ್ಷಣಾ ವಿಧೇಯಕವನ್ನು ವಿಧಾನಸಭೆಯಲ್ಲಿ (ಡಿಸೆಂಬರ್-11-23) ಮಂಡಿಸಲಾಗಿತ್ತು. ವಕೀಲರ ಮೇಲೆ ಹಲ್ಲೆ ಮಾಡಿದವರಿಗೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸುವ 2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಹೆಚ್ ಕೆ ಪಾಟೀಲ್ ವಿಧಾನಸಭೆಯಲ್ಲಿ ಮಂಡಿಸಿದ್ದರು.

ವಕೀಲರ ಮೇಲೆ ಹಲ್ಲೆ ತಡೆಯುವ ನಿಟ್ಟಿನಲ್ಲಿ ಈ ವಿಧೇಯಕ ತರಲಾಗಿದೆ. ಹಲ್ಲೆ ಮಾಡಿದ ವ್ಯಕ್ತಿಗೆ 6 ತಿಂಗಳಿಂದ 3 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಸಿವಿಲ್ ನ್ಯಾಯಾಲಯಗಳ ತಿದ್ದುಪಡಿ ವಿಧೇಯಕ ಸೇರಿ ಮೂರು ತಿದ್ದುಪಡಿ ವಿಧೇಯಕಗಳ ಮಂಡನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.