ETV Bharat / state

ವಿಧಾನಸಭೆ ಚುನಾವಣೆಗೆ ಸಿದ್ಧತೆ: ರಾಜ್ಯದ ಕಾಂಗ್ರೆಸ್ ನಾಯಕರ ಬಸ್​ ಯಾತ್ರೆ ಪ್ರವಾಸದ ಪಟ್ಟಿ ಬಿಡುಗಡೆ

ವಿಧಾನ ಸಭೆ ಚುನಾವಣೆಗ ಸಿದ್ಧಗೊಳ್ಳುತ್ತಿರುವ ಕಾಂಗ್ರೆಸ್ ರಾಜ್ಯದ ಹಿರಿಯ ನಾಯಕರ ಬಸ್ ಯಾತ್ರೆಯ ಪ್ರವಾಸದ ಪಟ್ಟಿಯನ್ನು ಶುಕ್ರವಾರ ಬಿಡುಗಡೆಗೊಳಿಸಿದೆ.

congress leaders bus tour list released
ಕಾಂಗ್ರೆಸ್ ಬಸ್​ ಯಾತ್ರೆ ಪ್ರವಾಸ ಪಟ್ಟಿ ಬಿಡುಗಡೆ
author img

By

Published : Dec 23, 2022, 1:57 PM IST

ಬೆಳಗಾವಿ: ರಾಜ್ಯದ ಕಾಂಗ್ರೆಸ್ ನಾಯಕರ ಬಸ್​ ಯಾತ್ರೆಯ ಪ್ರವಾಸದ ಪಟ್ಟಿ ದಿನಾಂಕವಾರು ಬಿಡುಗಡೆಗೊಂಡಿದೆ. ಕರ್ನಾಟಕ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಜತೆ ರಾಜ್ಯದ ಹಿರಿಯ ನಾಯಕರೊಂದಿಗೆ ಡಿ.30 ರಿಂದ, 2023ರ ಜ.29 ರ ವರೆಗೆ ಬಸ್ ಮೂಲಕ ಪ್ರವಾಸ ಮಾಡಿ ಎಲ್ಲ ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಇದರಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್​ ಹಿರಿಯ ನಾಯಕರು ಒಗ್ಗಟ್ಟಾಗಿ ಈ ಪ್ರವಾಸ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

congress leaders bus tour list released
ಕಾಂಗ್ರೆಸ್ ಬಸ್​ ಯಾತ್ರೆ ಪ್ರವಾಸ ಪಟ್ಟಿ ಬಿಡುಗಡೆ

ಎರಡು ಹಂತದಲ್ಲಿ ಪ್ರವಾಸ: ಜಿಲ್ಲಾ ಪ್ರವಾಸದ ಮುಂದುವರಿದ ಭಾಗವಾಗಿ ಎರಡು ತಂಡಗಳು ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದೆ. ದಕ್ಷಿಣ ಕರ್ನಾಟಕ ವಿಭಾಗಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ರವರ ನೇತೃತ್ವದ ತಂಡ ಹಾಗೂ ಉತ್ತರ ಕರ್ನಾಟಕ ವಿಭಾಗಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ತಂಡವೂ ಪ್ರವಾಸ ಮಾಡಿ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಬಹಿರಂಗ ಸಭೆಗಳಲ್ಲಿ ಭಾಗವಹಿಸಲಿದೆ.

ಜಿ.ಸಿ. ಚಂದ್ರಶೇಖರ್, ಸಂಸದರು ದಕ್ಷಿಣ ಕರ್ನಾಟಕ ಭಾಗದ ಪ್ರವಾಸ ಕಾರ್ಯಕ್ರಮಗಳ ಸಂಯೋಜಕರಾಗಿದ್ದಾರೆ. ಬಸವರಾಜ ರಾಯರೆಡ್ಡಿ, ಮಾಜಿ ಸಚಿವರು ಉತ್ತರ ಭಾಗದ ಪ್ರವಾಸ ಕಾರ್ಯಕ್ರಮಗಳ ಸಂಯೋಜಕರಾಗಿರುತ್ತಾರೆ. ಈ ತಂಡಗಳಲ್ಲಿ ಆಯಾ ಭಾಗದ ಜಿಲ್ಲಾ ಕಾಂಗ್ರೆಸ್ /ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷರು, ಸಂಸದರು, ವಿಧಾನ ಪರಿಷತ್ ಸದಸ್ಯರುಗಳು, ಕೆಪಿಸಿಸಿ ಉಸ್ತುವಾರಿ ಪದಾಧಿಕಾರಿಗಳು, ಹಿಂದೆ ಸ್ಪರ್ಧಿತ ಚುನಾವಣಾ ಅಭ್ಯರ್ಥಿಗಳು, ಭಾರತ್ ಜೋಡೋ ಯಾತ್ರೆಯ ಸಮಿತಿ ಪದಾಧಿಕಾರಿಗಳು, ವಿಧಾನ ಸಭಾ ಕ್ಷೇತ್ರಗಳ ಕೆಪಿಸಿಸಿ ಸಂಯೋಜಕರುಗಳು, ಪಕ್ಷದ ಟಿಕೆಟ್ ಆಕಾಂಕ್ಷಿಗಳು ಈ ಪ್ರವಾಸ ಕಾರ್ಯಕ್ರಮಗಳನ್ನು ಸಂಘಟಿಸಲು ಪೂರ್ಣ ಸಹಕಾರ ನೀಡುವಂತೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಪಿಸಿಸಿ ಜಿಲ್ಲಾ ಉಸ್ತುವಾರಿ ಕಾರ್ಯಾಧ್ಯಕ್ಷರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳು (ಕರ್ನಾಟಕ ರಾಜ್ಯ ಜಿಲ್ಲಾ ಉಸ್ತುವಾರಿ), ಕೆಪಿಸಿಸಿ ಜಿಲ್ಲಾ ಉಸ್ತುವಾರಿ ಪದಾಧಿಕಾರಿಗಳನ್ನೊಳಗೊಂಡ ತಂಡವು ಮುಂಚಿತವಾಗಿ ಪಾದಯಾತ್ರೆ/ಸಭೆಗಳು ನಡೆಯುವ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಸಭೆಗಳ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು.

ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳು ಪಕ್ಷದ ಎಲ್ಲ ಹಂತಗಳಲ್ಲಿ ನಡೆಯುವ ಬೃಹತ್‌ ಸಭೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಪಕ್ಷದ ಎಲ್ಲಾ ಹಂತಗಳಲ್ಲಿ ಇದೇ ರೀತಿಯಲ್ಲಿ ಬಹಿರಂಗ ಸಭೆಗಳನ್ನು ನಡೆಸಬೇಕು ಇಂತಹ ಸಭೆಗಳನ್ನು ಮುಕ್ತ ಪ್ರದೇಶದಲ್ಲಿ (ಅಗತ್ಯವಿದ್ದಲ್ಲಿ ಕಾಮಿಯಾನ ಪಂಡಾಲ್‌ಗಳನ್ನು ನಿರ್ಮಿಸಿಕೊಂಡು ನಡೆಸಬೇಕು. ಪಕ್ಷದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಮೇಲಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಪ್ರಕರಟಣೆಯಲ್ಲಿ ಕೋರಿದ್ದಾರೆ.

ಇದನ್ನೂಓದಿ:ಡಬಲ್ ಇಂಜಿನ್​ ಸರ್ಕಾರ ಏನು ಮಾಡುತ್ತಿಲ್ಲ: ಜಿ ಪರಮೇಶ್ವರ್ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.