ಅಥಣಿ: ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಥಣಿ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ಹಾಗೂ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಅಲ್ಲದೆ ತಾ.ಪಂ ಮತ್ತು ಜಿ.ಪಂ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುವ ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಉಪಚುನಾವಣೆಯಲ್ಲಿ ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ನ್ನು ಮಹೇಶ್ ಕುಮಟಳ್ಳಿಗೆ ನೀಡುವುದು ಖಚಿತವಾಗಿದ್ದು, ಇದರಿಂದ ಅಸಮಾಧಾನಗೊಂಡಿರುವ ತಾಲೂಕು ಬಿಜೆಪಿ ನಾಯಕರು ಮತ್ತು ತಾಪಂ ಮತ್ತು ಜಿಪಂ ಸದಸ್ಯರು ಸಾಮೂಹಿಕ ರಾಜೀನಾಮೆ ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳಿಂದ ಈಟಿವಿ ಭಾರತಗೆ ಮಾಹಿತಿ ಲಭಿಸಿದೆ.

ನಾವು ಲಕ್ಷ್ಮಣ್ ಸವದಿ ಮುಂದಾಳತ್ವದಲ್ಲಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡವರು. ಅವರು ಇಲ್ಲದೆ ಪಕ್ಷದಲ್ಲಿ ಇರಲು ಸಾಧ್ಯವಿಲ್ಲ. ಹಾಗಾಗಿ ರಾಜೀನಾಮೆಗೆ ಸಿದ್ಧತೆ ನಡೆಸಿದ್ದೇವೆ. ಈ ವಿಷಯ ಲಕ್ಷ್ಮಣ ಸವದಿ ಅವರ ಗಮನಕ್ಕೆ ತಂದಿದ್ದು, ಸ್ವಲ್ಪ ಸಮಯ ಕಾಯಿರಿ ಎಂದಿದ್ದಾರೆ. ಸದ್ಯ ಅವರ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ.
ಸದ್ಯ ಲಕ್ಷ್ಮಣ್ ಸವದಿಯವರಿಗೆ ಟಿಕೆಟ್ ನೀಡಿ ಎಂದು ನಾಳೆ ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಸಿದ್ದೇಶ್ವರ ದೇವಾಲಯದಿಂದ ಅಥಣಿ ಪಟ್ಟಣದವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಮುಂದೆ ಇದು ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಾಗಿದೆ.