ಅಥಣಿ(ಬೆಳಗಾವಿ): ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ನಡೆದ ದಲಿತ ಯುವತಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಅಥಣಿಯಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅತ್ಯಾಚಾರಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದರು. ಜೊತೆಗೆ, ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ, ದಲಿತ ಸಂಘರ್ಷ ಸಮಿತಿ ಮುಖಂಡ ಶಶಿ ಸಾಳ್ವೆ ಮಾತನಾಡಿ, ಉತ್ತರಪ್ರದೇಶ ಸರ್ಕಾರ ನೈತಿಕ ಹೊಣೆ ಹೊತ್ತು ಯೋಗಿ ಆದಿತ್ಯನಾಥ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.