ETV Bharat / state

ತಹಶೀಲ್ದಾರ್‌ ಹತ್ಯೆ ಖಂಡಿಸಿದ ಅಥಣಿ ಸರ್ಕಾರಿ ನೌಕರರ ಸಂಘ; ಭದ್ರತೆ ನೀಡಲು ಮನವಿ

author img

By

Published : Jul 10, 2020, 11:51 PM IST

ಈ ರೀತಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಅಧಿಕಾರಿಗಳ ಮೇಲೆ ಮೇಲಿಂದ ಮೇಲೆ ಹಲ್ಲೆಗಳಾಗುತ್ತಿರುವುದು ಸರಿಯಲ್ಲ. ಆದ್ದರಿಂದ ಇನ್ಮುಂದೆ ಸರ್ಕಾರಿ ಅಧಿಕಾರಿಗಳಿಗೆ ಭದ್ರತೆ ಕೊಡುವಂತೆ ಆಗ್ರಹಿಸಿದರು.

Athani
ಅಥಣಿ ಸ

ಅಥಣಿ: ಕೋಲಾರ ತಹಶೀಲ್ದಾರ್​ ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಸರ್ಕಾರಿ ನೌಕರರ ಸಂಘದಿಂದ ಅಥಣಿ ತಹಶೀಲ್ದಾರ್​ ದುಂಡಪ್ಪಾ ಕೋಮಾರ್​ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ತಹಶೀಲ್ದಾರ್‌ ಹತ್ಯೆ ಖಂಡಿಸಿದ ಅಥಣಿ ಸರ್ಕಾರಿ ನೌಕರರ ಸಂ

ಬಳಿಕ ಮಾತನಾಡಿದ ಅಥಣಿ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರಾಮನಗೌಡ ಧರಿಗೌಡರ, ಸರ್ಕಾರಿ ನೌಕರರ ಮೇಲಿನ ಹಲ್ಲೆ ಖಂಡನೀಯ. ಜಮೀನು ವಿವಾದದ ಸರ್ವೇ ಮಾಡಿ ಬರುವಾಗ ಕೊಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ತಹಶೀಲ್ದಾರ್ ದೊಡ್ಡಕಳವಂಚಿ ಗ್ರಾಮದಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದರು. ಈ ರೀತಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಅಧಿಕಾರಿಗಳ ಮೇಲೆ ಆಗಾಗ ಹಲ್ಲೆಗಳಾಗುತ್ತಿರುವುದು ಸರಿಯಲ್ಲ. ಆದ್ದರಿಂದ ಇನ್ಮುಂದೆ ಸರ್ಕಾರಿ ಅಧಿಕಾರಿಗಳಿಗೆ ಭದ್ರತೆ ಕೊಡುವಂತೆ ಆಗ್ರಹಿಸಿದರು. ಜೊತೆಗೆ ಮೃತ ಚಂದ್ರಮೌಳೇಶ್ವರ ಕುಟುಂಬಕ್ಕೆ ಪರಿಹಾರ, ಮನೆಯವರಿಗೆ ಕೆಲಸ ಕೊಡುವಂತೆಯೂ ಸರ್ಕಾರವನ್ನು ಒತ್ತಾಯಿಸಿದರು.

ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಸರ್ಕಾರಿ ನೌಕರರು ಪ್ರಾಮಾಣಿಕ ಕೆಲಸ ಮಾಡುವ ಸಮಯದಲ್ಲಿ ಸಂದಿಗ್ಧ ಪರಿಸ್ಥಿತಿ ಎದುರಾಗುತ್ತವೆ. ಇಂತಹ ಸಮಯದಲ್ಲಿ ಎಚ್ಚರಿಕೆಯಿಂದ ಕೆಲಸ ನಿರ್ವಹಣೆ ಮಾಡಬೇಕು. ಹಾಗೂ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಾಯ ತೆಗೆದುಕೊಂಡ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ತಾಲೂಕು ಆಡಳಿತದ ಆರೋಗ್ಯ ಇಲಾಖೆ, ಕಂದಾಯ ಇಲಾಖೆ,ತಾಲೂಕು ಪಂಚಾಯತಿ, ಲೋಕೋಪಯೋಗಿ ಇಲಾಖೆ ಸೇರಿದಂತೆ ಹಲವು ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.