ಅಥಣಿ: ಕೋವಿಡ್-19 ಭೀತಿ ಹೆಚ್ಚಾದ ಹಿನ್ನೆಲೆ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಗಡಿಗ್ರಾಮ ಕೊಟ್ಟಲಗಿಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಔಷಧ ಸಿಂಪಡಣೆ ಮಾಡಲಾಯಿತು.
ಅಥಣಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಗ್ರಾಮದ ಬೀದಿ ಬೀದಿಗಳಲ್ಲಿ ಔಷಧಿ ಸಿಂಪಡಣೆ ಮಾಡುವ ಮೂಲಕ ಕೊರೊನಾ ವೈರಸ್ ನಿವಾರಣೆಗೆ ವಿಶೇಷ ಕ್ರಮ ಕೈಗೊಳ್ಳಲಾಗಿದೆ.
ಪಂಚಾಯತಿ ಪಿಡಿಓ ಡಾ.ಕಾಡೇಶ ಅಡಹಳ್ಳಿ, ಉಪಾಧ್ಯಕ್ಷ ಗುರಪ್ಪ ಸತ್ತಿ ಅವರು ವಿಶೇಷ ಮುತುವರ್ಜಿವಹಿಸಿ ಔಷಧಿ ಸಿಂಪರಣೆ ಮಾಡಿಸಿದ್ದಾರೆ. ಅಲ್ಲದೇ ಕೊರೊನಾ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದ್ದಾರೆ.