ಅಥಣಿ: ತಾಲೂಕಿನಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಅಧಿಕಾರಿಗಳೊಂದಿಗೆ ನಗರದ ಪ್ರವಾಸಿ ಮಂದಿರದಲ್ಲಿ ಮಹತ್ವದ ಸಭೆ ನಡೆಸಿದರು.
ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ದರ್ಶನ್ ಹೆಚ್. ವಿ, ಎಸ್ಪಿ ಲಕ್ಷ್ಮಣ್ ನಿಂಬರಗಿ, ಚಿಕ್ಕೋಡಿ ಉಪವಿಭಾಗಧಿಕಾರಿ ಯುಕೇಶ್ ಕುಮಾರ್ ಮತ್ತು ಅಥಣಿ ತಾಲೂಕು ಆಡಳಿತದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ತಾಲೂಕಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಇದನ್ನೂ ಓದಿ : ಬೆಳಗಾವಿಯಲ್ಲಿ 11 ಜನರ ಅಂತ್ಯಕ್ರಿಯೆ: ವೆಂಟಿಲೇಟರ್ ಬೆಡ್ ಕೊಡಿಸಿ ಎಂದು ಗೋಳಾಡಿದ್ದ ಮಹಿಳೆಯ ತಂದೆ ಸಾವು
ಈ ವೇಳೆ ಈಟಿವಿ ಭಾರತ ಜೊತೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಅಥಣಿ ಹಾಗೂ ಗೋಕಾಕ್ ತಾಲೂಕಿನಲ್ಲಿ ಕೋವಿಡ್ ಅಬ್ಬರ ಜೋರಾಗಿದೆ. ಹಾಗಾಗಿ, ಅಥಣಿಯಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ಅಥಣಿ ತಾಲೂಕಿನಲ್ಲಿ ಇನ್ನೊಂದು ಕೋವಿಡ್ ಆಸ್ಪತ್ರೆ ತೆರೆಯುವ ಸಲುವಾಗಿ ಶಾಸಕರು, ಅಧಿಕಾರಿಗಳು ಸಭೆ ನಡೆಸಿದ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.