ಅಥಣಿ : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದ ಸರ್ಕಾರದ ನಿರ್ದೇಶನದಂತೆ ಪ್ರತಿ ಭಾನುವಾರ ಲಾಕ್‌ಡೌನ್ ನಿಯಮ ಜಾರಿಯಾಗಿದ್ದರಿಂದ ಪಟ್ಟಣದಲ್ಲಿ ಸರಕು ವಾಹನ ಸಂಚಾರ ಹೊರತುಪಡಿಸಿ. ಅಂಗಡಿ-ಮುಂಗಟ್ಟುಗಳು, ವ್ಯಾಪಾರ, ವಹಿವಾಟ ಬಂದ್ ಮಾಡಲಾಗಿದೆ.
ತಾಲೂಕಿನಲ್ಲಿ ದಿನೇದಿನೆ ಹೆಚ್ಚುತ್ತಿರುವ ಸೋಂಕಿತ ಪ್ರಕರಣ : ಶನಿವಾರ ಒಂದೇ ದಿನ 7 ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಎಚ್ಚೆತ್ತ ಪುರಸಭೆ ಅಧಿಕಾರಿಗಳು ಮಾಸ್ಕ್ ಧರಿಸದೇ ಹೊರ ಬಂದವರಿಗೆ ದಂಡ ಹಾಕುತ್ತಿದ್ದಾರೆ.
ಪಟ್ಟಣದ ಎಲ್ಲಾ ವ್ಯಾಪಾರಸ್ಥರು ಹಾಗೂ ವಿತರಕರು ಜುಲೈ 1ರವರೆಗೆ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಿದ್ದಾರೆ. ಅಧಿಕಾರಿಗಳು ನಮಗೆ ಮಾರ್ಗದರ್ಶನ ನೀಡಲಿ, ನಮ್ಮ ಸಹಮತವಿದೆ, ಈ ಮಹಾಮಾರಿಯಿಂದ ಜನರನ್ನು ರಕ್ಷಿಸುವ ಕಾರ್ಯ ಮಾಡಬೇಕಾಗಿದೆ ಎಂದು ವ್ಯಾಪಾರಸ್ಥರೊಬ್ಬರು ತಿಳಿಸಿದರು.
ಮುಂಜಾಗ್ರತಾ ಕ್ರಮವಾಗಿ ಪುರಸಭೆ ಸಿಬ್ಬಂದಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸೋಂಕು ತಡೆಗೆ ರೋಗ ನೀರೋಧಕ ಔಷಧ ಸಿಂಪಡಣೆ ಮಾಡಿದರು.