ಕೊರೊನಾ ಆತಂಕದ ನಡುವೆ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಿದ್ಧತೆ - ಅಥಣಿ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಿದ್ಧತೆ ಸುದ್ದಿ
ಕೊರೊನಾ ಆತಂಕ ನಡುವೆ ಅಥಣಿ ತಾಲೂಕು ಆಡಳಿತ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಕುಡಿಯುವ ನೀರಿನ ವ್ಯವಸ್ಥೆ ನೀಡಲಾಗುವುದಿಲ್ಲ ವಿದ್ಯಾರ್ಥಿಗಳು ಮನೆಯಿಂದ ನೀರು ತರಬೇಕು ಎಂದು ತಿಳಿಸಿದೆ.
ಅಥಣಿ: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಬಿ. ಮುರಟಗಿ ಈಟಿವಿ ಭಾರತಗೆ ವಿವರಣೆ ನೀಡಿದರು.
ಜೂನ್ 25ರಿಂದ ಜುಲೈ 4 ವರಗೆ ಪರೀಕ್ಷೆ ನಡೆಯಲಿದೆ. ಅಥಣಿ ತಾಲೂಕಿನಲ್ಲಿ 5,827 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ತಾಲೂಕಿನಲ್ಲಿ 21 ಪರೀಕ್ಷಾ ಕೇಂದ್ರಗಳು, ಪಟ್ಟಣದಲ್ಲಿ 3, ಗ್ರಾಮಿಣ ಭಾಗದಲ್ಲಿ 18 ಪರೀಕ್ಷಾ ಕೇಂದ್ರಗಳನ್ನ ನಿಗದಿ ಪಡಿಸಲಾಗಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಸಾಮಾಜಿಕ ಅಂತರದ ಜೊತೆಗೆ, ಒಂದು ಕೊಠಡಿಯಲ್ಲಿ ಕನಿಷ್ಠ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಪರೀಕ್ಷಾ ಕೇಂದ್ರಗಳ ಮುಖ್ಯ ದ್ವಾರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಏನಾದರೂ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿದರೆ ಅಂತಹವರಿಗೆ ಪ್ರತ್ಯೇಕ ಕೊಠಡಿ ಕಲ್ಪಿಸಿ ಕೊಡಲಾಗುತ್ತದೆ.
ಪರೀಕ್ಷಾ ಸಮಯದಲ್ಲಿ ನಿಗದಿ ಪಡಿಸಿದ ಸ್ಥಳದಲ್ಲಿ ಕಂಟೇನ್ಮೆಂಟ್ ಝೋನ್ ಆಗಿದ್ದರೆ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಲಾಗುವುದು. ಅಲ್ಲದೇ ಇದಕ್ಕಾಗಿ ಹೆಚ್ಚುವರಿಯಾಗಿ ಮೂರು ಪರೀಕ್ಷಾ ಕೇಂದ್ರಗಳು ಕಾಯ್ದಿರಿಸಲಾಗಿದೆ. ಸಾರಿಗೆ ಅನುಕೂಲ ಇಲ್ಲದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರುವುದಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಮಕ್ಕಳಿಗೆ ಉಚಿತವಾಗಿ ಮಾಸ್ಕ್ ನೀಡಲಾಗುವುದು, 75 ಲೀಟರ್ ಸ್ಯಾನಿಟೈಸರ್ ಹಾಗೂ 10,000 ಸಾವಿರ ಮಾಸ್ಕ್ ಕ್ರೋಢೀಕರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.