ETV Bharat / state

ಸಂಸತ್ ಭವನದ ಮೇಲೆ ನಡೆದಿರುವ ದಾಳಿ ಖಂಡನೀಯ ಮತ್ತು ಆಘಾತಕಾರಿ: ಸಿಎಂ ಸಿದ್ದರಾಮಯ್ಯ - ಸ್ಮೋಕ್ ಬಾಂಬ್​

ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಗುರಿಯಾಗಿರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದು ಎಂಬ ಸಂಶಯ ಮೂಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

CM Siddaramaiah
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Dec 13, 2023, 4:19 PM IST

Updated : Dec 14, 2023, 6:15 AM IST

ಬೆಳಗಾವಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಬುಧವಾರ ನಡೆದಿರುವ ದಾಳಿ ಖಂಡನೀಯ, ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು ಎಂದು ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಭದ್ರತಾ ವ್ಯವಸ್ಥೆಯ ಲೋಪ: ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿ ಭದ್ರತೆ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ ಹಾಗೂ ಅದರಲ್ಲೂ ಪ್ರಮುಖವಾಗಿ ದೇಶದ ಗೃಹ ಸಚಿವರ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

22 ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಗುರಿಯಾಗಿರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದು ಟೀಕಿಸಿದ್ದಾರೆ.

  • ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ…

    — Siddaramaiah (@siddaramaiah) December 13, 2023 " class="align-text-top noRightClick twitterSection" data=" ">

ಸಂಸದರನ್ನು ವಿಚಾರಣೆಗೆ ಒಳಪಡಿಸಲಿ: ’’ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರು ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿರುವ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೇ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ‘‘ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬ್​ ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರು ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತವೆ ಎಂದಿದ್ದಾರೆ.

ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತಾ ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತವೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂಓದಿ:ಲೋಕಸಭೆಯಲ್ಲಿ ಭದ್ರತಾ ಲೋಪ: ನಾಲ್ವರ ಬಂಧನ, ಆರೋಪಿಗಳ ಗುರುತು ಪತ್ತೆ

Last Updated : Dec 14, 2023, 6:15 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.