ಅಥಣಿ: ಪಟ್ಟಣದ ಪತ್ರಕರ್ತರು ಹಾಗೂ ಮಾನವ ಹಕ್ಕುಗಳ ಸಂಘಟನೆಯ ಸದಸ್ಯರು ಸಾರ್ವಜನಿಕರಿಗೆ ಗುಲಾಬಿ ಹೂ ನೀಡಿ ಕೊರೊನಾ ವೈರಸ್ ಕುರಿತು ಅರಿವು ಮೂಡಿಸಿದರು.
ಕೊರೊನಾ ವೃರಸ್ನಿಂದ ಭಾರತ ಲಾಕ್ಡೌನ್ ಇಂದು 9ನೇ ದಿನಕ್ಕೆ ಕಾಲಿಟ್ಟಿದೆ. ಸಾರ್ವಜನಿಕರ ಮೇಲೆ ಪೊಲೀಸರು ಲಾಠಿ ಬೀಸದಂತೆ ಆದೇಶಿಸಿದ ಬೆನ್ನಲ್ಲೇ ರಸ್ತೆಯಲ್ಲಿ ಅನವಶ್ಯಕವಾಗಿ ಬೈಕ್ ಚಲಾಯಿಸುತ್ತಿದ್ದ ಸಾರ್ವಜನಿಕರನ್ನು ತಡೆದು ಮನೆಯಿಂದ ಹೊರ ಬರದಂತೆ ಮನವಿ ಮಾಡಲಾಯಿತು.
ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ದೀಪಕ್ ಶಿಂಧೆ ಮಾತನಾಡಿ, ವಿನಾ ಕಾರಣ ರಸ್ತೆಗೆ ಇಳಿಯುತ್ತಿರುವ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪು ಸೇರುತ್ತಿರುವ ಸಾರ್ವಜನಿಕರಿಗೆ ಗುಲಾಬಿ ಹೂವು ನೀಡಿ ಮನೆ ಬಿಟ್ಟು ಹೊರ ಬರದಂತೆ ಮನವಿ ಮಾಡುತ್ತಿದ್ದೇವೆ ಎಂದರು.