ಬೆಳಗಾವಿ: ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರವಾಹ ಪೀಡಿತ ಪ್ರದೇಶಗಳನ್ನು ಜಂಟಿಯಾಗಿ ಪರಿಶೀಲಿಸುವ ಮೂಲಕ ಗಮನ ಸೆಳೆದರು.
ಮೂಡಲಗಿ ಭಾಗದಲ್ಲಿ ನಿಖಿಲ್ ಹಾಗೂ ಬಾಲಚಂದ್ರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಬಾಲಚಂದ್ರ, ಜಲ ಪ್ರವಾಹದಿಂದಾಗಿ ಕ್ಷೇತ್ರದ 30ಕ್ಕೂ ಅಧಿಕ ನದಿ ತೀರದ ಗ್ರಾಮಗಳು ಮುಳುಗಡೆಯಾಗಿದ್ದು, ಇದರಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ, ಬೆಳೆಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿವೆ.
ಈ ಭಾಗದಲ್ಲಿ ಮಳೆಯ ಆರ್ಭಟಕ್ಕೆ ಕಬ್ಬು ಬೆಳೆ ಸಂಪೂರ್ಣವಾಗಿ ನೀರು ಪಾಲಾಗಿದೆ. ನಿರಾಶ್ರಿತರ ಕೂಗಿನ ಹಿನ್ನೆಲೆಯಲ್ಲಿ ನಷ್ಟಕ್ಕೊಳಗಾದ ಕಬ್ಬಿನ ಬೆಳೆಗಳಿಗೂ ಸಹ ಪರಿಹಾರ ದೊರಕಿಸಿಕೊಡಲು ಯತ್ನಿಸುವುದಾಗಿ ತಿಳಿಸಿದರು.