ETV Bharat / state

ಬಾಲಚಂದ್ರ ಜಾರಕಿಹೊಳಿ‌ ನೇತೃತ್ವದಲ್ಲಿ ಕಾಂಗ್ರೆಸ್ ಸೋಲಿಸಲು ರಣತಂತ್ರ - ವಿಧಾನ ಪರಿಷತ್ ಚುನಾವಣೆ

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಗರದ ಖಾಸಗಿ ಹೊಟೇಲ್‍ನಲ್ಲಿ ವಿಧಾನ ಪರಿಷತ್ ಚುನಾವಣೆಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಯಿತು.

ಬಾಲಚಂದ್ರ ಜಾರಕಿಹೊಳಿ‌ ನೇತೃತ್ವದಲ್ಲಿ ಕಾಂಗ್ರೆಸ್ ಸೋಲಿಸಲು ರಣತಂತ್ರ

author img

By

Published : Nov 26, 2021, 9:52 PM IST

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೆಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಸಭೆ ನಡೆಸಲಾಯಿತು.

ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್​​ ಪಾಲ್ಗೊಂಡು ವಿಧಾನ ಪರಿಷತ್ ಚುನಾವಣೆಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.

ಮೂರನೇ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸಲು ಎಲ್ಲ ಬಿಜೆಪಿ ಮುಖಂಡರುಗಳು ಒಂದಾಗಿ ಶ್ರಮಿಸಬೇಕು. ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲೇಬೇಕು. ಇದಕ್ಕಾಗಿ ಕಾರ್ಯಕರ್ತರು ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸುವಂತೆ ಈ ಸಭೆಯಲ್ಲಿ ಮನವರಿಕೆ ಮಾಡಲಾಯಿತು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಹಾಂತೇಶ ಕವಟಗಿಮಠ ಅವರು ವಿಧಾನ ಪರಿಷತ್ ಸದಸ್ಯರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಇವರ ಆಯ್ಕೆಗೆ ಎಲ್ಲ ಕಾರ್ಯಕರ್ತರು ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೆಲಸ ನಿರ್ವಹಿಸುವಂತೆ ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.