ETV Bharat / state

ಕುಟುಂಬವೇ ಬೇರೆ, ರಾಜಕಾರಣವೇ ಬೇರೆ, ಗೊಂದಲ ಮಾಡಿಕೊಳ್ಳದೇ ಬಿಜೆಪಿಗೆ ಮತನೀಡಿ: ಬಾಲಚಂದ್ರ ಜಾರಕಿಹೊಳಿ - Belagavi election 2021

ಕಳೆದ ಚುನಾವಣೆಗಿಂತ ಈ ಬಾರಿ ಅತ್ಯಧಿಕ ಮತಗಳ ಮುನ್ನಡೆ ದೊರಕಿಸಿಕೊಡುವ ಜವಾಬ್ದಾರಿ ನನ್ನದು ಎಂದು ಪಕ್ಷದ ಮುಖಂಡರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ದೇಶದ ಸಮಗ್ರತೆ, ಸುರಕ್ಷತೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕು ಎಂದಿದ್ದಾರೆ.

Balachandra jarkiholi
ಬಾಲಚಂದ್ರ ಜಾರಕಿಹೊಳಿ
author img

By

Published : Apr 12, 2021, 10:11 PM IST

ಬೆಳಗಾವಿ: ಕುಟುಂಬವೇ ಬೇರೆ, ರಾಜಕಾರಣವೇ ಬೇರೆ. ಗೊಂದಲ ಮಾಡಿಕೊಳ್ಳದೇ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರನ್ನು ಬೆಂಬಲಿಸುವಂತೆ ಕೆಎಂಎಫ್ ‌ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ ಮನವಿ ಮಾಡಿದ್ದಾರೆ.

ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆ ಗೋಕಾಕ್​​​ನಲ್ಲಿ ಆಯೋಜಿಸಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಏ 17ರಂದು ನಡೆಯುವ ಈ ಉಪಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೇ ದೇಶದ ಸಮಗ್ರತೆ, ಸುರಕ್ಷತೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕು. ಬಿಜೆಪಿ ಅಭ್ಯರ್ಥಿಗೆ ತಮ್ಮ ಮತ ನೀಡಿ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕೈಜೋಡಿಸಬೇಕು ಎಂದರು.

ಬೆಳಗಾವಿಯ ಪ್ರಚಾರ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಭಾಷಣ

ಕೆಲವೊಂದು ಕಾರ್ಯದ ಒತ್ತಡದಿಂದ ಕ್ಷೇತ್ರಕ್ಕೆ ಬರಲು ಆಗಲಿಲ್ಲ. ನನ್ನ ಅನುಪಸ್ಥಿತಿಯಲ್ಲಿಯೂ ಸಹ ನಮ್ಮೆಲ್ಲ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಿಜೆಪಿ ಪರ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ನಾಯಕರುಗಳೊಂದಿಗೆ ನಿತ್ಯ ಸಂಪರ್ಕಿದಲ್ಲಿದ್ದು, ಚುನಾವಣೆಯ ಪ್ರಚಾರ ಕಾರ್ಯದ ಬಗ್ಗೆ ಚರ್ಚಿಸುತ್ತಿದ್ದೆ. ನನ್ನ ಮೇಲೆ ಅಭಿಮಾನವಿರುವ ಅರಭಾವಿ ಕ್ಷೇತ್ರದ ಮತದಾರರನ್ನು ಪಡೆದಿರುವುದು ನನ್ನ ಪುಣ್ಯ. ನನ್ನ ಅನುಪಸ್ಥಿತಿಯಲ್ಲಿ ಸಹ ನಾವು ಸೂಚಿಸಿದ ರೀತಿಯಲ್ಲಿಯೇ ಕೆಲಸ ಮಾಡುತ್ತಾರೆ. ನೀವು ಹೆದರಬೇಡಿ, ಕಳೆದ ಚುನಾವಣೆಗಿಂತ ಈ ಬಾರಿ ಅತ್ಯಧಿಕ ಮತಗಳ ಮುನ್ನಡೆ ದೊರಕಿಸಿಕೊಡುವ ಜವಾಬ್ದಾರಿ ನನ್ನದು ಎಂಬ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದರು.

ಈ ಸಂದೇಶವನ್ನು ಪ್ರತಿಯೊಬ್ಬ ಕಾರ್ಯಕರ್ತರು ಮತದಾರರಿಗೆ ಮುಟ್ಟಿಸಬೇಕು. ಯಾವುದೇ ಕಾರಣಕ್ಕೂ ತಪ್ಪು ಗ್ರಹಿಕೆಗೆ ಅವಕಾಶ ಮಾಡಿಕೊಡಬೇಡಿ. ಅಲ್ಲದೇ ಯಾರೂ ದಾರಿ ತಪ್ಪಬೇಡಿ, ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪ ಕೈ ಬಲಪಡಿಸಲು ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಮನವಿ ಮಾಡಿಕೊಂಡರು.

ನಾಳೆಯಿಂದಲೇ ಅರಭಾವಿ ಮತಕ್ಷೇತ್ರಾದದ್ಯಂತ ಮಂಗಳಾ ಅಂಗಡಿ ಪರ ಪ್ರಚಾರ ಕೈಗೊಳ್ಳುತ್ತೇನೆ. ಈ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆಯುತ್ತಿದ್ದೇನೆ. ನಮ್ಮ ಪಕ್ಷದ ವರಿಷ್ಠರು ವಿಶ್ವಾಸವನ್ನಿಟ್ಟುಕೊಂಡಿದ್ದು, ಅದನ್ನು ಚಾಚು ತಪ್ಪದೇ ಅಂಗಡಿ ಪರ ಮತಯಾಚಿಸುತ್ತೇನೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.