ಅಥಣಿ/ಬೆಳಗಾವಿ: ನೆರೆ ಸಂತ್ರಸ್ತರಿಗೆ ಯಾವುದೇ ರೀತಿ ಸಾಲ ಮರುಪಾವತಿಗೆ ನೋಟಿಸ್ ನೀಡಬಾರದು ಎಂದು ಸರ್ಕಾರದ ಸ್ಪಷ್ಟ ಆದೇಶವಿದ್ದರೂ ಅಥಣಿ ಐಸಿಐಸಿಐ ಬ್ಯಾಂಕ್ ರೈತನಿಗೆ ನೋಟಿಸ್ ನೀಡಿ ಶಾಕ್ ನೀಡಿದೆ. ಹೀಗಾಗಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ಅಥಣಿ ಐಸಿಐಸಿಐ ಬ್ಯಾಂಕ್ ನೋಟಿಸ್ ನೀಡಿದ್ದಲ್ಲದೇ ರೈತನ ಟ್ರ್ಯಾಕ್ಟರ್ ಜಪ್ತಿ ಮಾಡಿದೆ. ಸುಟ್ಟಟ್ಟಿ ಗ್ರಾಮದ ರೈತ ಹನಮಂತ ಸವದಿಗೆ ಸೇರಿದ ಟ್ರ್ಯಾಕ್ಟರ್ ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಜಿಲ್ಲೆಯ ಡಿಸಿ ಆದೇಶಕ್ಕೆ ಕಿಮ್ಮತ್ತು ನೀಡದ ಐಸಿಐಸಿಐ ಬ್ಯಾಂಕ್ ಸಿಬ್ಬಂದಿ ನಿಯಮ ಮೀರಿ ವರ್ತಿಸಿದ್ದಾರೆ.