ETV Bharat / state

ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

author img

By

Published : Aug 1, 2021, 4:23 PM IST

ನಿರಂತರವಾಗಿ ಈ ಭಾಗದ ರೈತರು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ. ಸ್ಥಳೀಯ ಮಠಾಧೀಶರನ್ನು ಕರೆದುಕೊಂಡು ಒಂದು ನಿಯೋಗ ಮಾಡಿ ಆದಷ್ಟು ಬೇಗನೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವರಿಕೆ ಹಾಗೂ ಈ ಭಾಗಕ್ಕೆ ಸಿಗಬೇಕಾದ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗುವುದು..

Basava Jayamrutyajaya swamiji
ಬಸವ ಜಯಮೃತ್ಯುಂಜಯ ಸ್ವಾಮೀಜಿ

ಅಥಣಿ : ಅನೇಕ ವರ್ಷಗಳಿಂದ ಉತ್ತರ ಕರ್ನಾಟಕ ಅಥಣಿ ಹಾಗೂ ಬಾಗಲಕೋಟೆ ಜಿಲ್ಲೆಯ ಗ್ರಾಮಗಳು ಕೃಷ್ಣಾನದಿ ನೆರೆ ಹಾವಳಿಗೆ ತತ್ತರಿಸಿ ಹೋಗಿದ್ದು, ಸರ್ಕಾರಗಳು ಈ ಭಾಗಕ್ಕೆ ಶಾಶ್ವತ ಪರಿಹಾರ ನೀಡದೆ ಸಂತ್ರಸ್ತರಿಗೆ ಅನ್ಯಾಯ ಮಾಡುತ್ತಿವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.

ಶಾಶ್ವತ ಪರಿಹಾರಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

ಇಂದು ಸ್ವಾಮೀಜಿಗಳು ಅಥಣಿ ತಾಲೂಕಿನ ನೆರೆ ಸಂತ್ರಸ್ತ ಗ್ರಾಮಗಳಿಗೆ ಭೇಟಿ ನೀಡಿದರು. ಈ ವೇಳೆ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಆಳಿದ ಎಲ್ಲಾ ಸರ್ಕಾರಗಳು ಉತ್ತರ ಕರ್ನಾಟಕ ಎಂದರೆ ಅಲ್ಪತೃಪ್ತರು ಎಂದೇಳಿ ಪ್ರತಿ ಬಾರಿ ಮೂಗಿಗೆ ತಪ್ಪ ಹಚ್ಚುವ ಕೆಲಸ ಮಾಡುತ್ತಿವೆ. ಅದನ್ನು ಬಿಟ್ಟು ಸರ್ಕಾರ ನೆರೆ ಸಂತ್ರಸ್ತರ ಕಣ್ಣು ಒರೆಸುವ ಕೆಲಸ ಮಾಡಬೇಕು. ಈ ಭಾಗದ ಜನರಿಗೆ ಶಾಶ್ವತ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ಓದಿ: ಶಾಲೆಗಳ ಆರಂಭ ಸದ್ಯಕ್ಕಿಲ್ಲ, ಶಾಲಾ ಸಂಘಟನೆಗಳ ಜತೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ : ಸಿಎಂ ಸ್ಪಷ್ಟನೆ

ನಿರಂತರವಾಗಿ ಈ ಭಾಗದ ರೈತರು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ. ಸ್ಥಳೀಯ ಮಠಾಧೀಶರನ್ನು ಕರೆದುಕೊಂಡು ಒಂದು ನಿಯೋಗ ಮಾಡಿ ಆದಷ್ಟು ಬೇಗನೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವರಿಕೆ ಹಾಗೂ ಈ ಭಾಗಕ್ಕೆ ಸಿಗಬೇಕಾದ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.