ಬೆಳಗಾವಿ: ಬಸವೇಶ್ವರ ಜಯಂತಿ ಅಂಗವಾಗಿ ಬೆಳಗಾವಿ ಜಿಲ್ಲಾಡಳಿತ ವತಿಯಿಂದ ನಗರದ ಗೋವಾವೇಸ್ನಲ್ಲಿರುವ ಬಸವೇಶ್ವರ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ ಅಂಗಡಿ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ನಂತರ ಮಾತನಾಡಿದ ಅವರು, ನಾಡಿನ ಸಮಸ್ತ ಜನರಿಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರಿದರು. ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಮನೆಯಲ್ಲಿರುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಶಾಸಕ ಅನಿಲ್ ಬೆನಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೂಳಪ್ಪ ಹೊಸಮನಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.