ETV Bharat / state

ಬೆಳಗಾವಿ: ಮಹಿಳೆ ಮೂಗು ಕೊಯ್ದಿದ್ದ ಆರೋಪಿ ಅರೆಸ್ಟ್​ - ಮೂಗು ಕೊಯ್ದಿದ್ದ ಆರೋಪಿ

ಬೆಳಗಾವಿ ತಾಲ್ಲೂಕಿನ ಬಸುರ್ತೆ ಗ್ರಾಮದಲ್ಲಿ ಮನೆ ಮುಂದಿನ ಗಿಡದಲ್ಲಿರುವ ಹೂವು ಕಿತ್ತಿದ್ದಾರೆ ಎನ್ನುವ ಕ್ಷುಲ್ಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ಮೂಗು ಕೊಯ್ದಿದ್ದ ಆರೋಪಿ ಅರೆಸ್ಟ್​
ಮಹಿಳೆ ಮೂಗು ಕೊಯ್ದಿದ್ದ ಆರೋಪಿ ಅರೆಸ್ಟ್​
author img

By ETV Bharat Karnataka Team

Published : Jan 4, 2024, 10:56 PM IST

ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಬಸುರ್ತೆ ಗ್ರಾಮದಲ್ಲಿ ಮನೆ ಮುಂದಿನ ಗಿಡದಲ್ಲಿನ ಹೂವು ಕಿತ್ತಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ಅಂಗನವಾಡಿಯ ಸಹಾಯಕಿಯ ಮೂಗು ಕತ್ತರಿಸಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜನವರಿ 1 ರಂದು ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ ಅವರ ಮೇಲೆ ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಕಲ್ಯಾಣಿ ಮೋರೆ (44) ಪರಾರಿಯಾಗಿದ್ದ. ಇಂದು (ಗುರುವಾರ) ಆರೋಪಿಯನ್ನು ಕಾಕತಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ‌ ವಿರುದ್ಧ ಕಲಂ 326 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳೆಯ ಮೂಗನ್ನು ಕುಡಗೋಲಿನಿಂದ ಕತ್ತರಿಸಿರುವ ಹಿನ್ನೆಲೆಯಲ್ಲಿ ಶ್ವಾಸಕೋಶದಲ್ಲಿ ರಕ್ತ ಹೋಗಿ ಸಾವು ಬದುಕಿನ ಮಧ್ಯೆ ಸಂತ್ರಸ್ತೆ ಸುಗಂಧಾ ನರಳಾಡುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇತ್ತೀಚಿನ ಘಟನೆ, ಆರೋಪಿ ಬಂಧನಕ್ಕೆ ಆಗ್ರಹಿಸಿದ್ದ ಸಿಐಟಿಯು: ವ್ಯಕ್ತಿಯೊಬ್ಬ ಅಂಗನವಾಡಿಯ ಸಹಾಯಕಿಯ ಮೂಗು ಕತ್ತರಿಸಿದ್ದ ಪ್ರಕರಣವನ್ನು ಖಂಡಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿತ್ತು. ಸುಗಂಧಾ ಗಜಾನನ ಮೋರೆ ಎಂಬ ಅಂಗನವಾಡಿ ಸಹಾಯಕಿ ಮೇಲೆ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದನು.‌ ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

''ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಯಭೀತವಾಗಿ ಕೆಲಸ ಮಾಡುವ ಸ್ಥಿತಿಯಿದೆ. ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ಹಲ್ಲೆ ಪ್ರಕರಣಗಳ ಆಗುತ್ತಿವೆ. ಬೇಟಿ ಬಚಾವೋ ಬೇಟಿ ಪಡಾವೋ, ಸುಕನ್ಯಾ ಸಮೃದ್ಧಿ ಯೋಜನೆಗಳಿವೆ. ಆದ್ರೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಹಲ್ಲೆಗೊಳಾದ ಮಹಿಳೆಯ ಅವರ ಕುಟುಂಬಕ್ಕೆ ಆಧಾರವಾಗಿದ್ದಳು. ಅವರಿಗೆ ಸೂಕ್ತ ಪರಿಹಾರ ನೀಡಬೇಕು. ಆರೋಪಿ ವಿರುದ್ಧ ಸೂಕ್ತ ಕ್ರಮವಹಿಸಬೇಕು ಎಂದು ಸಂಘದ ಗೌರವ ಅಧ್ಯಕ್ಷ ಜಿ‌ ಎಂ ಜೈನೆಖಾನ್ ಇತ್ತೀಚೆಗೆ ಒತ್ತಾಯಿಸಿದ್ದರು.

''ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಆಗಿರುವುದು ದುರಂತ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು'' ಎಂದು ಸಂಘದ ಜಿಲ್ಲಾ ಉಪಾಧ್ಯಕ್ಷೆ ಮಂದಾ ನೇವಗಿ ಆಗ್ರಹಿಸಿದ್ದರು. ಮೀರಾ ಮೋರೆ, ಸುಜಾತಾ ಕುಲಕರ್ಣಿ, ವಂದನಾ ಹೊನಗೇಕರ್, ರೇಣುಕಾ ಖಾಂಡೇಕರ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಇದ್ದರು.

ಇದನ್ನೂ ಓದಿ: ಅರ್ಜುನ ಪ್ರಶಸ್ತಿ ಪುರಸ್ಕೃತ ವೇಟ್‌ಲಿಫ್ಟರ್, ಡಿಎಸ್​ಪಿಯ ಹತ್ಯೆ: ಆಟೋ ಚಾಲಕ ಸೆರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.