ETV Bharat / state

ಬೆಳಗಾವಿ ಎಪಿಎಂಸಿ ಮಾರುಕಟ್ಟೆಯಲ್ಲಿ ಜನಜಂಗುಳಿಗೆ ಬಿತ್ತು ಬ್ರೇಕ್; ಸಾಮಾಜಿಕ ‌ಅಂತರ ಕಾಯ್ದುಕೊಳ್ಳುತ್ತಿರುವ ಜನರು

author img

By

Published : Mar 30, 2020, 12:39 PM IST

ಉತ್ತರ ಕರ್ನಾಟಕದ ಪ್ರಮುಖ ತರಕಾರಿ ಮಾರುಕಟ್ಟೆಯಾಗಿರುವ ಬೆಳಗಾವಿಯಲ್ಲಿ ನಾಲ್ಕೈದು ದಿನಗಳಿಂದ ಜನಜಂಗುಳಿ ಇತ್ತು.‌‌ ಈ‌ ಕುರಿತು ‌ಈಟಿವಿ ಭಾರತ ವರದಿ ಮಾಡಿತ್ತು. ವರದಿಗೆ ಸ್ಪಂದಿಸಿದ ‌ಜಿಲ್ಲಾಡಳಿತ‌ ಜನಜಂಗುಳಿಗೆ ಬ್ರೇಕ್ ಹಾಕಿದೆ. ಈಗ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ.

belagavi news
ಬೆಳಗಾವಿ ಎಪಿಎಂಸಿ ಮಾರುಕಟ್ಟೆಯಲ್ಲಿ ಜನಜಂಗುಳಿಗೆ ಬಿತ್ತು ಬ್ರೇಕ್

ಬೆಳಗಾವಿ: ನಗರದ ಎಪಿಎಂಸಿಯಲ್ಲಿರುವ ಹೋಲ್ ಸೇಲ್ ತರಕಾರಿ ‌ಮಾರುಕಟ್ಟೆಯಲ್ಲಿ ಜನ ಜಂಗುಳಿಗೆ ಬ್ರೇಕ್‌ ಹಾಕುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊರೊನಾ ಸೋಂಕು ಹರಡದಂತೆ ತಡೆಯುವಲ್ಲಿ ಭಾರತದಾದ್ಯಂತ ಲಾಕ್‌ಡೌನ್‌ ಮಾಡಲಾಗಿದೆ. ಉತ್ತರ ಕರ್ನಾಟಕದ ಪ್ರಮುಖ ತರಕಾರಿ ಮಾರುಕಟ್ಟೆಯಾಗಿರುವ ಇಲ್ಲಿ‌ ನಾಲ್ಕೈದು ದಿನಗಳಿಂದ ಜನಜಂಗುಳಿ ಇತ್ತು.‌‌ ಈ‌ ಕುರಿತು ‌ಈಟಿವಿ ಭಾರತ ವರದಿ ಮಾಡಿತ್ತು. ವರದಿಗೆ ಸ್ಪಂದಿಸಿದ ‌ಜಿಲ್ಲಾಡಳಿತ‌ ಜನಜಂಗುಳಿಗೆ ಬ್ರೇಕ್ ಹಾಕಿದೆ. ಈಗ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ.

ಜನಜಂಗುಳಿ ನಿಯಂತ್ರಿಸಲು ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಒಂದು ಕೆಎಸ್‌ಆರ್‌ಪಿ ತುಕಡಿ ಕೂಡ ನಿಯೋಜಿಸಲಾಗಿದೆ. ಓರ್ವ ಎಸಿಪಿ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್‌ ಏರ್ಪಡಿಸಿರುವುದರಿಂದ‌ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಳಗ್ಗೆ ವೇಳೆ ಚಿಲ್ಲರೆ ವ್ಯಾಪಾರಸ್ಥರಿಗೆ ತರಕಾರಿ ಖರೀದಿಗೆ ಹಾಗೂ ಮಧ್ಯಾಹ್ನ 2 ರಿಂದ ರಾತ್ರಿ 8ರವರೆಗೆ ರೈತರು ತರಕಾರಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ ತರಕಾರಿ ಖರೀದಿಗೆ ಅವಕಾಶವಿಲ್ಲ. ಹಾಪ್‌ಕಾಮ್ಸ್ ಹಾಗೂ ಎಪಿಎಂಸಿ ವಾಹನಗಳ ಮೂಲಕ ನಗರದ 58 ವಾರ್ಡ್‌ಗಳಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ‌ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.