ETV Bharat / state

ಬೆಳಗಾವಿ: ಸಂಶಯಾಸ್ಪದವಾಗಿ ಓಡಾಡುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು - Etv bharat kannada

ಅನುಮಾನಾಸ್ಪದವಾಗಿ ಓಡಾಟ- ಬೆಳಗಾವಿ ಜಿಲ್ಲೆಯಲ್ಲಿ ನಾಲ್ವರು ಪೊಲೀಸರ ವಶ, ವಿಚಾರಣೆ- ಓರ್ವನನ್ನು ಕಾಗವಾಡದ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಅಧಿಕಾರಿಗಳು

ಬೆಳಗಾವಿ
ಬೆಳಗಾವಿ
author img

By

Published : Jul 31, 2022, 9:29 PM IST

Updated : Jul 31, 2022, 9:35 PM IST

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡು, ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿದ್ದಾರೆ. ಓರ್ವನನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ಮತ್ತೆ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.

ಈ ವೇಳೆ ನಾಲ್ವರನ್ನು ತೀವ್ರ ವಿಚಾರಣೆ ನಡೆಸಿದ ಅಧಿಕಾರಿಗಳು ಮೂವರನ್ನು ವಾಪಸ್ ಕಳುಹಿಸಿದ್ದಾರೆ. ನಿನ್ನೆಯಿಂದ ಗ್ರಾಮದಲ್ಲಿ ಸಿಸಿಬಿ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ. ಇತ್ತ ವಶಕ್ಕೆ ಪಡೆದ ಓರ್ವನನ್ನು ಕಾಗವಾಡದ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಂಕಿತ ಆರೋಪಿ ಶಿರಗುಪ್ಪಿ ಗ್ರಾಮದವ‌ ಎನ್ನಲಾಗ್ತಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಚಿತ್ರದುರ್ಗ ನಗರ ಪ್ರವೇಶಿಸಲು ಮೈನ್ಸ್ ಲಾರಿಗಳಿಗೆ ನಿರ್ಬಂಧ: ಡಿಸಿ ಆದೇಶ

ಈ ಬಗ್ಗೆ ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಅವರನ್ನ ಕೇಳಿದ್ರೆ, ಕಾಗವಾಡ ಪೊಲೀಸರೇ ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.

Last Updated : Jul 31, 2022, 9:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.