ETV Bharat / state

ಮಿಷನ್ 2023: ಒಂದಾದ ಸತೀಶ್​ - ಪಟ್ಟಣ್, ಮುನಿಸು ಮರೆತ ಅಂಜಲಿ - ಹೆಬ್ಬಾಳ್ಕರ್! - Belgaum congress leaders Together the party organization

ಒಂದೇ ಪಕ್ಷದಲ್ಲಿದ್ದರೂ ಅಂತರ ಕಾಯ್ದುಕೊಳ್ಳುತ್ತಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಮಾಜಿ ಶಾಸಕ ಅಶೋಕ ಪಟ್ಟಣ ಕೆಲ ದಿನಗಳಿಂದ ಜೊತೆಯಾಗಿದ್ದಾರೆ. ಮತ್ತೊಂದೆಡೆ ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್-ಅಂಜಲಿ ನಿಂಬಾಳ್ಕರ್ ಕೂಡ ಪಕ್ಷ ಸಂಘಟನೆ ದೃಷ್ಟಿಯಿಂದ ಮುನಿಸು ಮರೆತು ಒಂದೇ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಒಂದೇ ಪಕ್ಷದಲ್ಲಿದ್ದರೂ ದೂರಾನೇ ಇರುತ್ತಿದ್ದ ಸತೀಶ ಜಾರಕಿಹೊಳಿ - ಲಕ್ಷ್ಮಿ ಹೆಬ್ಬಾಳ್ಕರ್ ಈಗ ಅತಿ ಹತ್ತಿರವಾಗಿದ್ದಾರೆ. ಜಿಲ್ಲೆಯ ಕೈ ನಾಯಕರು ಒಂದಾಗಿರುವುದು ಇತ್ತ ಕಾರ್ಯಕರ್ತರು ಹುಮ್ಮಸ್ಸಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

Belgaum congress leaders  Together  the party organization
ಪಕ್ಷ ಸಂಘಟನೆಗೆ ಮುಂದಾದ ಬೆಖಗಾವಿಯ ಕಾಂಗ್ರೆಸ್​ ನಾಯಕರು
author img

By

Published : Jun 5, 2021, 8:37 PM IST

Updated : Jun 5, 2021, 9:50 PM IST

ಬೆಳಗಾವಿ: ರಾಜಧಾನಿ ಬೆಂಗಳೂರು ನಂತರ ಅತಿ ಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಗಡಿ ಜಿಲ್ಲೆ ಬೆಳಗಾವಿಯ ಕಾಂಗ್ರೆಸ್ ನಾಯಕರು 2023ರ ಸಾರ್ವತ್ರಿಕ ವಿಧಾನಸಭೆ ಚುಣಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಇದಕ್ಕಾಗಿ ಭಿನ್ನಮತ, ವೈಮನಸ್ಸು ಬದಿಗಿಟ್ಟು ಜಿಲ್ಲೆಯ ಕೈ ನಾಯಕರು ಒಂದಾಗಿದ್ದಾರೆ.

ಪಕ್ಷ ಸಂಘಟನೆಗೆ ಮುಂದಾದ ಬೆಖಗಾವಿಯ ಕಾಂಗ್ರೆಸ್​ ನಾಯಕರು

ಬೆಳಗಾವಿ ಜಿಲ್ಲೆಯಲ್ಲಿ ಯಾವ ಪಕ್ಷ ಅತಿ ಹೆಚ್ಚು ಶಾಸಕರನ್ನು ಹೊಂದುತ್ತೊ ಆ ಪಕ್ಷಕ್ಕೆ ಸರ್ಕಾರ ರಚನೆಗೆ ಸರಳವಾಗುತ್ತದೆ. ಈ ಕಾರಣಕ್ಕೆ ಸತೀಶ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಳಿಕ ಜಿಲ್ಲೆಯ ಕಾಂಗ್ರೆಸ್ ನಾಯಕರಲ್ಲಿದ್ದ ವೈಮನಸ್ಸು, ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ ಎಲ್ಲರನ್ನು ಒಗ್ಗೂಡಿಸಿದ್ದಾರೆ. ಈ ಕಾರಣಕ್ಕೆ ಈ ಹಿಂದೆ ಅಂತರ ಕಾಯ್ದುಕೊಳ್ಳುತ್ತಿದ್ದ ಜಿಲ್ಲೆಯ ನಾಯಕರು ಇದೀಗ ಅಕ್ಕಪಕ್ಕದಲ್ಲಿ ಕುಳಿತು ಒಂದೇ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಆ ಮೂಲಕ ನಾವೆಲ್ಲರೂ ಒಂದೇ ಇದ್ದೇವೆ ಎಂಬ ಸಂದೇಶವನ್ನು ಜಿಲ್ಲೆಯ ಕಾರ್ಯಕರ್ತರಿಗೆ ರವಾನಿಸಿದ್ದಾರೆ.

ಜಿಲ್ಲೆಯ ನಾಯಕರ ಒಗ್ಗಟ್ಟು ಪ್ರದರ್ಶನ ಇತ್ತ ಕಾರ್ಯಕರ್ತರ ಉತ್ಸಾಹ ಹೆಚ್ಚಳಕ್ಕೆ ಕಾರಣವಾಗಿದ್ದು, ಪಕ್ಷ ಸಂಘಟನೆಗೂ ನೆರವಾಗಿದೆ. ಇದಕ್ಕೆ ಇತ್ತೀಚೆಗೆ ನಡೆದ ಲೋಕಸಭೆ ಉಪಚುನಾವಣೆಯ ಫಲಿತಾಂಶವೇ ಸಾಕ್ಷಿ. ಬಿಜೆಪಿ ಶಾಸಕರಿರುವ ಅರಬಾವಿ, ರಾಮದುರ್ಗ, ಸವದತ್ತಿ, ಬೆಳಗಾವಿ ಉತ್ತರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್​ ಮೇಲುಗೈ ಸಾಧಿಸಲು ನೆರವಾಯಿತು. ಈಗಿರುವ ಕಾರ್ಯಕರ್ತರಲ್ಲಿನ ಉತ್ಸಾಹ ಇಮ್ಮುಡಿಗೊಳಿಸಲು ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಸಭೆ ಸಮಾರಂಭ, ಸರ್ಕಾರದ ವಿರುದ್ಧ ಒಂದಾಗಿಯೇ ಹೋರಾಡುತ್ತಾರೆ. ಆಗಾಗ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಒಟ್ಟುಗೂಡಿ ಸಂಘಟನೆ ದೃಷ್ಟಿಯಿಂದ ಸಭೆ ನಡೆಸಲಾಗುತ್ತಿದೆ. ಜಿಲ್ಲೆಯ ಕೈ ನಾಯಕರು ಒಂದೇ ವೇದಿಕೆ ಹಂಚಿಕೊಳ್ಳುವ ಮೂಲಕ ಕಾರ್ಯಕರ್ತರಿಗೆ ಒಗ್ಗಟ್ಟಿನ ಸಂದೇಶ ರವಾನಿಸುತ್ತಿದ್ದಾರೆ.

ಟಾರ್ಗೆಟ್ 10; ಸತೀಶ್​ ತಂತ್ರವೇನು? ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಬರುವ 8 ವಿಧಾನಸಭೆ ಕ್ಷೇತ್ರಗಳಲ್ಲಿ ಈಗ ಬೆಳಗಾವಿ ಗ್ರಾಮೀಣ ಹಾಗೂ ಬೈಲಹೊಂಗಲ ಹೊರತುಪಡಿಸಿದರೆ 6 ಶಾಸಕರು ಬಿಜೆಪಿಯವರೇ ಇದ್ದಾರೆ. ಇನ್ನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಯಮಕನಮರಡಿ ಹಾಗೂ ಚಿಕ್ಕೋಡಿ-ಸದಲಗಾ ಕ್ಷೇತ್ರ ಹೊರತುಪಡಿಸಿದ್ರೆ ಉಳಿದ 6 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಇನ್ನು ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಖಾನಾಪುರ ಹಾಗೂ ಕಿತ್ತೂರು ಕ್ಷೇತ್ರದಲ್ಲಿ ಓರ್ವ ಬಿಜೆಪಿ ಹಾಗೂ ಓರ್ವ ಕಾಂಗ್ರೆಸ್‍ನ ಶಾಸಕರಿದ್ದಾರೆ. ಜಿಲ್ಲೆಯಲ್ಲಿಗ 13 ಬಿಜೆಪಿ ಹಾಗೂ ಐವರು ಕಾಂಗ್ರೆಸ್ ಶಾಸಕರಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ. ಇತ್ತೀಚೆಗೆ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೀರಸ ಸೋಲು ಅನುಭವಿಸಿದೆ. ಬಿಜೆಪಿ ಶಾಸಕರಿರುವ ನಾಲ್ಕು ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಈ ನಾಲ್ಕು ಕ್ಷೇತ್ರಗಳನ್ನು ಕಾಂಗ್ರೆಸ್ ಬಾವುಟ ಹಾರಿಸಲು ಸತೀಶ್​ ತಂತ್ರ ರೂಪಿಸುತ್ತಿದ್ದಾರೆ. ಸ್ಥಳೀಯ ನಾಯಕರಲ್ಲಿನ ಗೊಂದಲ ನಿವಾರಿಸಿ, ಪಕ್ಷಕ್ಕಾಗಿ ಒಂದಾಗಿ ಎಂದು ಹೇಳುವ ಮೂಲಕ ಎಲ್ಲರನ್ನು ಒಗ್ಗೂಡಿಸುವ ಕೆಲಸವನ್ನು ಸತೀಶ್​ ಮಾಡುತ್ತಿದ್ದಾರೆ. ತಿಂಗಳಿಗೆ ಒಮ್ಮೆಯಾದರೂ ಪ್ರತಿವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ ಸ್ಥಳೀಯ ಮುಖಂಡರ ಜೊತೆಗೆ ಸಭೆ ನಡೆಸುತ್ತಿದ್ದಾರೆ.

ಇನ್ನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಬರುವ ರಾಯಭಾಗದಲ್ಲಿ ಕಾಂಗ್ರೆಸ್ ಕಡಿಮೆ ಅಂತರದಿಂದ ಸೋತಿತ್ತು. ಅಥಣಿ-ಕಾಗವಾಡದಲ್ಲಿ ಕಾಂಗ್ರೆಸ್ ಶಾಸಕರಿದ್ದರು. ನಂತರ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದಾರೆ. ಮುಂದಿನ ಚುನಾವಣೆಯಲ್ಲಿ ಆ ಎರಡೂ ಕ್ಷೇತ್ರಗಳನ್ನು ವಶಪಡಿಸಿಕೊಳ್ಳಲು ಸತೀಶ್​ ಮುಂದಾಗಿದ್ದಾರೆ. ಈಗಾಗಲೇ ಐವರು ಕಾಂಗ್ರೆಸ್ ಶಾಸಕರಿದ್ದು, ಅವುಗಳನ್ನು ಉಳಿಸಿಕೊಳ್ಳುವ ಜೊತೆಗೆ ಮತ್ತೇ ಐದರಿಂದ - ಏಳು ಕ್ಷೇತ್ರಗಳ ಮೇಲೆ ಕಣ್ಣಿಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ.

ಕಾಂಗ್ರೆಸ್ ಘರ್​ ವಾಪ್ಸಿ ಅಭಿಯಾನ: ಕಾಂಗ್ರೆಸ್ ಬಿಟ್ಟು ಹೋಗಿರುವ ಮುಖಂಡರು ಹಾಗೂ ಕಾರ್ಯಕರ್ತರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಲು ಜಿಲ್ಲೆಯ ಕೈ ಮುಖಂಡರು ಮುಂದಾಗಿದ್ದಾರೆ. ಈಗಾಗಲೇ ಅಶೋಕ ಪೂಜಾರಿ ಕಾಂಗ್ರೆಸ್ ಸೇರಿದ್ದು, ಉಳಿದವರಿಗೆ ಆಹ್ವಾನ ನೀಡಲಾಗುತ್ತಿದೆ. ಜಿಪಂ, ತಾಪಂ ಮಾಜಿ - ಹಾಲಿ ಸದಸ್ಯರನ್ನು ಮರಳಿ ಕರೆತರಲಾಗುತ್ತಿದೆ. ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಸಮಯವಿದ್ದರೂ ಈಗಲೇ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಕನಿಷ್ಠ 10 ಸ್ಥಾನ ಪಡೆಯಲು ಘರ್​ ವಾಪ್ಸಿ ಅಭಿಯಾನಕ್ಕೆ ಜಿಲ್ಲೆಯ ಕೈ ನಾಯಕರು ಮೊರೆ ಹೋಗಿದ್ದಾರೆ.

ಮತ್ತೊಂದೆಡೆ ಎಲ್ಲ ಸಮುದಾಯದವರಿಗೂ ಪಕ್ಷದಲ್ಲಿ ಜವಾಬ್ದಾರಿ ನೀಡುವ ಮೂಲಕ ಎಲ್ಲರನ್ನು ಸೆಳೆಯುವ ತಂತ್ರ ಮಾಡಲಾಗುತ್ತಿದೆ. ಇದಕ್ಕಾಗಿ ಮೊದಲು ನಾಯಕರು ಒಂದಾಗಿದ್ದು, ನಂತರ ಎರಡನೇ ಹಾಗೂ ಮೂರನೇ ಹಂತದ ನಾಯಕರನ್ನು ಒಗ್ಗೂಡಿಸುವ ಕೆಲಸ ಮಾಡಲಾಗುತ್ತಿದೆ. ಇರುತ್ತಿದ್ದ ಸತೀಶ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳ್ಕರ್ ಈಗ ಅತಿ ಹತ್ತಿರವಾಗಿದ್ದಾರೆ. ಜಿಲ್ಲೆಯ ಕೈ ನಾಯಕರು ಒಂದಾಗಿರುವುದು ಇತ್ತ ಕಾರ್ಯಕರ್ತರು ಹುಮ್ಮಸ್ಸಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

Last Updated : Jun 5, 2021, 9:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.