ಬೆಳಗಾವಿ: ಜಿಲ್ಲೆಯಲ್ಲಿ ಇಂದು ಒಂದೇ ದಿನ 20 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 414ಕ್ಕೆ ಏರಿಕೆಯಾಗಿದೆ.
ಐದು ವರ್ಷದ ಇಬ್ಬರು ಬಾಲಕಿಯರು ಸೇರಿ 20 ಜನರಿಗೆ ಕೊರೊನಾ ದೃಢಪಟ್ಟಿದೆ. ಪತ್ತೆಯಾದ 20 ಪ್ರಕರಣಗಳಿಗೂ ಟ್ರಾವೆಲ್ ಹಿಸ್ಟರಿಯೇ ಇಲ್ಲ. ಎಲ್ಲಾ ಪ್ರಕರಣಗಳ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ಮಹಾಮಾರಿ ಕೊರೊನಾ ಗಡಿ ಜಿಲ್ಲೆ ಬೆಳಗಾವಿಯ ಸಮುದಾಯಕ್ಕೆ ಹಬ್ಬಿದ ಅನುಮಾನ ವ್ಯಕ್ತವಾಗಿದೆ.
ರಾಜ್ಯ ಹೆಲ್ತ್ ಬುಲೆಟಿನ್ ಪ್ರಕಾರ ಬೆಳಗಾವಿಯಲ್ಲಿ ಕೊರೊನಾಗೆ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಗೋಕಾಕ್ ತಾಲೂಕಿನ ಕೊಣ್ಣೂರ ಪಟ್ಟಣದ 45 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 7 ಜನರು ಸಾವನ್ನಪ್ಪಿದ್ದಾರೆ. ಕೋವಿಡ್ ವಾರ್ಡ್ನಿಂದ 313 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ ಸದ್ಯ 94 ಸಕ್ರಿಯ ಕೇಸ್‌ಗಳಿವೆ.