ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14 ಸೋಂಕಿತರು ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಐವರು ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ. ಖಾನಾಪುರ, ಅಥಣಿ, ಬೈಲಹೊಂಗಲ, ಮೂಡಲಗಿ ಹಾಗೂ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ತಲಾ ಒಬ್ಬರು ಮೃತರಾಗಿದ್ದಾರೆ. ಇನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಇಬ್ಬರು ಮೃತರಾಗಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಬುಧವಾರ 1,205 ಹೊಸದಾಗಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೆಲವರನ್ನು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಉಳಿದವರು ಹೋಮ್ ಐಸೋಲೇಶನ್ ಆಗಿದ್ದಾರೆ.
ಅಥಣಿಯಲ್ಲಿ 224, ಬೆಳಗಾವಿಯಲ್ಲಿ 374, ಬೈಲಹೊಂಗಲದಲ್ಲಿ 80, ಚಿಕ್ಕೋಡಿಯಲ್ಲಿ 49, ಗೋಕಾಕಿನಲ್ಲಿ 83, ಹುಕ್ಕೇರಿಯಲ್ಲಿ 68, ಖಾನಾಪುರದಲ್ಲಿ 132, ರಾಮದುರ್ಗದಲ್ಲಿ 27, ರಾಯಭಾಗದಲ್ಲಿ 80 ಹಾಗೂ ಇತರೆ 9 ಹೊಸದಾಗಿ ಪ್ರಕರಣಗಳು ಪತ್ತೆಯಾಗಿವೆ. ಕೋವಿಡ್ ಹೆಚ್ಚಾಗುತ್ತಿರುವ ಕಾರಣ ಈಗಾಗಲೇ ಜಿಲ್ಲೆಯಲ್ಲಿ ಕಠಿಣ ಲಾಕ್ಡೌನ್ ಜಾರಿಯಲ್ಲಿದೆ.