ETV Bharat / state

ರಕ್ಷಣಾ ಕಾರ್ಯ ಚುರುಕು: ಈವರೆಗೆ 1.45 ಲಕ್ಷ ಜನರ ಸ್ಥಳಾಂತರ- ಡಿಸಿ ಬೊಮ್ಮನಹಳ್ಳಿ - undefined

323 ಗ್ರಾಮಗಳು ಹಾಗೂ ಕೆಲವು ಪಟ್ಟಣ ಪ್ರದೇಶಗಳು ಸೇರಿದಂತೆ ಒಟ್ಟಾರೆ 1,45,368 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಅದೇ ರೀತಿ ಪ್ರವಾಹಕ್ಕೆ ಸಿಲುಕಿದ 43,972 ಜಾನುವಾರುಗಳನ್ನು ಕೂಡ ಸ್ಥಳಾಂತರಿಸಿದ್ದು, ಸೂಕ್ತ ರಕ್ಷಣೆ ಮತ್ತು ಮೇವಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಡಿಸಿ ಬೊಮ್ಮನಹಳ್ಳಿ
author img

By

Published : Aug 9, 2019, 2:40 PM IST

ಬೆಳಗಾವಿ: ಮಹಾರಾಷ್ಟ್ರದಿಂದ ಬಿಡಲಾಗುತ್ತಿರುವ ಭಾರೀ ಪ್ರಮಾಣದ ನೀರು ಹಾಗೂ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ 14 ತಾಲೂಕುಗಳಲ್ಲೂ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂದಿನ(ಆಗಸ್ಟ್ 9)ವರೆಗೆ ಒಟ್ಟು 323 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಇದುವರೆಗೆ 28,103 ಕುಟುಂಬಗಳನ್ನು ಸ್ಥಳಾಂತರಿಸಿದ್ದು, ಪರಿಹಾರ ಕೇಂದ್ರಗಳಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

323 ಗ್ರಾಮಗಳು ಹಾಗೂ ಕೆಲವು ಪಟ್ಟಣ ಪ್ರದೇಶಗಳು ಸೇರಿದಂತೆ ಒಟ್ಟಾರೆ 1,45,368 ಜನರನ್ನು ಸ್ಥಳಾಂತರಿಲಾಗಿದೆ. ಅದೇ ರೀತಿ ಪ್ರವಾಹಕ್ಕೆ ಸಿಲುಕಿದ 43,972 ಜಾನುವಾರುಗಳನ್ನು ಕೂಡ ಸ್ಥಳಾಂತರಿಸಿದ್ದು, ಸೂಕ್ತ ರಕ್ಷಣೆ ಮತ್ತು ಮೇವಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

327 ಪರಿಹಾರ ಕೇಂದ್ರ ಸ್ಥಾಪನೆ:

‌ಜಿಲ್ಲೆಯ ಎಲ್ಲ 14 ತಾಲೂಕುಗಳಲ್ಲಿ ಇದುವರೆಗೆ 327 ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಊಟೋಪಹಾರ, ವೈದ್ಯಕೀಯ ಸೌಲಭ್ಯ ಸೇರಿದಂತೆ ಎಲ್ಲ ಬಗೆಯ ವ್ಯವಸ್ಥೆ ಒದಗಿಸಲಾಗುತ್ತಿದೆ. ಈ ಪರಿಹಾರ ಕೇಂದ್ರಗಳಲ್ಲಿ ಮಕ್ಕಳು ಸೇರಿದಂತೆ ಒಟ್ಟು 82,425 ಜನರು ಆಶ್ರಯ ಪಡೆದುಕೊಂಡಿದ್ದಾರೆ. ಅದೇ ರೀತಿ ರಕ್ಷಿಸಲಾದ ಹಾಗೂ ಸ್ಥಳಾಂತರಿಸಲಾದ ಜಾನುವಾರುಗಳ ಪೈಕಿ 26,750 ಜಾನುವಾರುಗಳಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ

ಚಿಕ್ಕೋಡಿಯಲ್ಲಿ ಹೆಚ್ಚು ಸ್ಥಳಾಂತರ:

ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ 6,953 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅಥಣಿ-4,351, ರಾಯಬಾಗ-4,349, ಖಾನಾಪುರ-236, ಹುಕ್ಕೇರಿ-975, ಗೋಕಾಕ-1,082, ಕಾಗವಾಡ-4,599, ನಿಪ್ಪಾಣಿ-2,973, ಮೂಡಲಗಿ-1,100, ಬೆಳಗಾವಿ-546, ಬೈಲಹೊಂಗಲ-38, ರಾಮದುರ್ಗ-628, ಸವದತ್ತಿ-631 ಹಾಗೂ ಕಿತ್ತೂರು-27 ಕುಟುಂಬಗಳನ್ನು ಆಗಸ್ಟ್ 9 ರವರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು.

3 ಹೆಲಿಕಾಪ್ಟರ್ ನಿಯೋಜನೆ:

ಪ್ರವಾಹಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಸೇನೆಯ ಮೂರು ಹೆಲಿಕಾಪ್ಟರ್ ಗಳನ್ನು ನಿಯೋಜಿಸಲಾಗಿದೆ. ಹೆಲಿಕಾಪ್ಟರ್ ಗಳನ್ನು ಬಳಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ನೌಕಾ ಮತ್ತು ವಾಯುಸೇನೆಯ ಯೋಧರು ಆಗಸ್ಟ್ 8 ರಂದು ಒಟ್ಟು 32 ಜನರನ್ನು ರಕ್ಷಿಸಿದ್ದಾರೆ. ಹಡಗಿನಾಳ-7, ಸುನ್ನಾಳ-18, ಬಾಗಲಕೋಟೆ ಜಿಲ್ಲೆಯ ಮುಧೋಳ-1 ಹಾಗೂ ರೂಗಿ-6 ಜನರನ್ನು ರಕ್ಷಿಸಿದ್ದು, ಕಾರ್ಯಾಚರಣೆ ಇಂದೂ ಮುಂದುವರಿದಿದೆ. ಇಂದು ರಾಮದುರ್ಗ ತಾಲೂಕಿನ ಹಂಪಿಹೊಳಿ ಮತ್ತು ಬಾಗಲಕೋಟೆಯ ಮುಧೋಳ ತಾಲೂಕಿನ ರೂಗಿಯಲ್ಲಿ ರಕ್ಷಣಾ ಕಾರ್ಯ ನಡೆಸಿದೆ ಎಂದು ತಿಳಿಸಿದರು.

ಆಹಾರ ಪೊಟ್ಟಣ ವಿತರಣೆ:

ಪ್ರವಾಹದಿಂದಾಗಿ ಚಿಕ್ಕೋಡಿ ತಾಲೂಕಿನ ಕೆಲ ಗ್ರಾಮಗಳು ನಡುಗಡ್ಡೆಯಂತಾಗಿದ್ದು, ಅಂತಹ ಪ್ರದೇಶಗಳಲ್ಲಿ ಹೆಲಿಕಾಪ್ಟರ್ ಮೂಲಕ ಆಹಾರ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ಸದಲಗಾ, ಇಂಗಳಿ, ಚಂದೂರ ಟೇಕ್, ಯಡೂರವಾಡಿ ಮತ್ತಿತರ ಕಡೆಗಳಲ್ಲಿ ಆಹಾರ ಪೊಟ್ಟಣ ಮತ್ತು ಕುಡಿಯುವ ನೀರಿನ ಬಾಟಲ್ ಗಳನ್ನು ಸೇನಾ ಹೆಲಿಕಾಪ್ಟರ್ ಮೂಲಕ ಪೂರೈಸಲಾಗುತ್ತಿದೆ. ಇದಲ್ಲದೇ ಬೆಳಗಾವಿ ನಗರದಲ್ಲಿಯೂ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ, ಮಹಾನಗರ ಪಾಲಿಕೆಯ ವತಿಯಿಂದ ನಿರ್ವಹಿಸಲಾಗುತ್ತಿದೆ. ಸೇನೆ, ಪೊಲೀಸ್, ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್, ಗೃಹ ರಕ್ಷಕದಳ ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಜನರು ಆತಂಕಕ್ಕೆ ಒಳಗಾಗದೇ ತುರ್ತು ಸಂದರ್ಭಗಳಲ್ಲಿ ಸಹಾಯವಾಣಿ ಕೇಂದ್ರಗಳು ಅಥವಾ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮನವಿ ಮಾಡಿದ್ದಾರೆ.

Intro:ಹೆಲಿಕಾಪ್ಟರ್ ಮೂಲಕವೇ ಉಳಿದವರ ರಕ್ಷಣಾ ಕಾರ್ಯ; ಡಿಸಿ ಬೊಮ್ಮನಹಳ್ಳಿ

ಬೆಳಗಾವಿ:
ಪ್ರವಾಹದಲ್ಲಿ ಸಿಲುಕಿಕೊಂಡಿರುವ ಎಲ್ಲರ ರಕ್ಷಣೆಗೂ ಹೆಲಿಕಾಪ್ಟರ್ ಬಳಸಲಾಗುವುದು ಎಂದು ಬೆಳಗಾವಿ ಡಿಸಿ ಡಾ.ಎಸ್.ಬಿ. ಬೊಮ್ಮನಹಳ್ಳಿ ‌ತಿಳಿಸಿದರು.
ಬೆಳಗಾವಿಯಲ್ಲಿ‌ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ಇಂದು‌ ಹಾಗೂ ಸಾಧ್ಯವಾದ್ರೆ ನಾಳೆ ಕೂಡ ಹೆಲಿಕಾಪ್ಟರ್ ಮೂಲಕ ರಕ್ಷಣಾ ‌ಕಾರ್ಯ‌ ನಡೆಯಲಿದೆ. ಜಿಲ್ಲೆಯ ಎಲ್ಲ ಸಪ್ತ ನದಿಗಳು ತುಂಬಿ ಹರಿಯುತ್ತಿವೆ. ಗ್ರಾಮಗಳಲ್ಲಿ ಸಿಲುಕಿರುವ ಜನರನ್ನು ಆದ್ಯತೆ ಮೇರೆಗೆ ರಕ್ಷಣೆ ಮಾಡಲಾಗುತ್ತಿದೆ. ಸೇನೆ ಮತ್ತು ವಾಯು ದಳದ ಮೂರು ಹೆಲಿಕಾಪ್ಟರ್ ರಕ್ಷಣೆಗೆ ಬಂದಿವೆ. ಹೆಲಿಕಾಪ್ಟರ್ ಜೆತೆಗೆ ಸೇನಾ, ಎನ್.ಡಿ.ಆರ್.ಎಫ್ ಮತ್ತು ಅಗ್ನಿ ಶಾಮಕ ಸಿಬ್ಬಂದಿ ಬೋಟ್ ಮೂಲಕ ಕಾರ್ಯಾಚರಣೆ ನಡೆಯಲಿದೆ. ನಿನ್ನೆ ಹೆಲಿಕಾಪ್ಟರ್ ಮೂಲಕ ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ 32 ಜನರ ರಕ್ಷಣೆ ಮಾಡಲಾಗಿದೆ. ಇಂದು ಬೆಳಗಾವಿ ಜಿಲ್ಲೆಯ ಎಂಟು ಗ್ರಾಮದಲ್ಲಿ ಜನರನ್ನು ರಕ್ಷಿಸುವ ಕಾರ್ಯ ನಡೆಯಲಿದೆ.
ಸವದತ್ತಿ, ರಾಮದುರ್ಗ, ಗೋಕಾಕ, ಚಿಕ್ಕೋಡಿ ತಾಲೂಕಿನ ಗ್ರಾಮದಲ್ಲಿ ಸಿಲುಕಿರುವ ಜನರ ರಕ್ಷಣಾ ಕಾರ್ಯ ನಡೆಯಲಿದೆ ಎಂದರು.
ಇನ್ನೂ ಮಹಾರಾಷ್ಟ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರಲಿದೆ.
ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು. ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಆಗುವಂತೆ ಸೂಚನೆ ನೀಡಿದರು.
--
KN_BGM_07_9_Helicopter_Operation_DC_Byte_7201786Body:ಹೆಲಿಕಾಪ್ಟರ್ ಮೂಲಕವೇ ಉಳಿದವರ ರಕ್ಷಣಾ ಕಾರ್ಯ; ಡಿಸಿ ಬೊಮ್ಮನಹಳ್ಳಿ

ಬೆಳಗಾವಿ:
ಪ್ರವಾಹದಲ್ಲಿ ಸಿಲುಕಿಕೊಂಡಿರುವ ಎಲ್ಲರ ರಕ್ಷಣೆಗೂ ಹೆಲಿಕಾಪ್ಟರ್ ಬಳಸಲಾಗುವುದು ಎಂದು ಬೆಳಗಾವಿ ಡಿಸಿ ಡಾ.ಎಸ್.ಬಿ. ಬೊಮ್ಮನಹಳ್ಳಿ ‌ತಿಳಿಸಿದರು.
ಬೆಳಗಾವಿಯಲ್ಲಿ‌ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ಇಂದು‌ ಹಾಗೂ ಸಾಧ್ಯವಾದ್ರೆ ನಾಳೆ ಕೂಡ ಹೆಲಿಕಾಪ್ಟರ್ ಮೂಲಕ ರಕ್ಷಣಾ ‌ಕಾರ್ಯ‌ ನಡೆಯಲಿದೆ. ಜಿಲ್ಲೆಯ ಎಲ್ಲ ಸಪ್ತ ನದಿಗಳು ತುಂಬಿ ಹರಿಯುತ್ತಿವೆ. ಗ್ರಾಮಗಳಲ್ಲಿ ಸಿಲುಕಿರುವ ಜನರನ್ನು ಆದ್ಯತೆ ಮೇರೆಗೆ ರಕ್ಷಣೆ ಮಾಡಲಾಗುತ್ತಿದೆ. ಸೇನೆ ಮತ್ತು ವಾಯು ದಳದ ಮೂರು ಹೆಲಿಕಾಪ್ಟರ್ ರಕ್ಷಣೆಗೆ ಬಂದಿವೆ. ಹೆಲಿಕಾಪ್ಟರ್ ಜೆತೆಗೆ ಸೇನಾ, ಎನ್.ಡಿ.ಆರ್.ಎಫ್ ಮತ್ತು ಅಗ್ನಿ ಶಾಮಕ ಸಿಬ್ಬಂದಿ ಬೋಟ್ ಮೂಲಕ ಕಾರ್ಯಾಚರಣೆ ನಡೆಯಲಿದೆ. ನಿನ್ನೆ ಹೆಲಿಕಾಪ್ಟರ್ ಮೂಲಕ ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ 32 ಜನರ ರಕ್ಷಣೆ ಮಾಡಲಾಗಿದೆ. ಇಂದು ಬೆಳಗಾವಿ ಜಿಲ್ಲೆಯ ಎಂಟು ಗ್ರಾಮದಲ್ಲಿ ಜನರನ್ನು ರಕ್ಷಿಸುವ ಕಾರ್ಯ ನಡೆಯಲಿದೆ.
ಸವದತ್ತಿ, ರಾಮದುರ್ಗ, ಗೋಕಾಕ, ಚಿಕ್ಕೋಡಿ ತಾಲೂಕಿನ ಗ್ರಾಮದಲ್ಲಿ ಸಿಲುಕಿರುವ ಜನರ ರಕ್ಷಣಾ ಕಾರ್ಯ ನಡೆಯಲಿದೆ ಎಂದರು.
ಇನ್ನೂ ಮಹಾರಾಷ್ಟ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರಲಿದೆ.
ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು. ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಆಗುವಂತೆ ಸೂಚನೆ ನೀಡಿದರು.
--
KN_BGM_07_9_Helicopter_Operation_DC_Byte_7201786Conclusion:ಹೆಲಿಕಾಪ್ಟರ್ ಮೂಲಕವೇ ಉಳಿದವರ ರಕ್ಷಣಾ ಕಾರ್ಯ; ಡಿಸಿ ಬೊಮ್ಮನಹಳ್ಳಿ

ಬೆಳಗಾವಿ:
ಪ್ರವಾಹದಲ್ಲಿ ಸಿಲುಕಿಕೊಂಡಿರುವ ಎಲ್ಲರ ರಕ್ಷಣೆಗೂ ಹೆಲಿಕಾಪ್ಟರ್ ಬಳಸಲಾಗುವುದು ಎಂದು ಬೆಳಗಾವಿ ಡಿಸಿ ಡಾ.ಎಸ್.ಬಿ. ಬೊಮ್ಮನಹಳ್ಳಿ ‌ತಿಳಿಸಿದರು.
ಬೆಳಗಾವಿಯಲ್ಲಿ‌ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ಇಂದು‌ ಹಾಗೂ ಸಾಧ್ಯವಾದ್ರೆ ನಾಳೆ ಕೂಡ ಹೆಲಿಕಾಪ್ಟರ್ ಮೂಲಕ ರಕ್ಷಣಾ ‌ಕಾರ್ಯ‌ ನಡೆಯಲಿದೆ. ಜಿಲ್ಲೆಯ ಎಲ್ಲ ಸಪ್ತ ನದಿಗಳು ತುಂಬಿ ಹರಿಯುತ್ತಿವೆ. ಗ್ರಾಮಗಳಲ್ಲಿ ಸಿಲುಕಿರುವ ಜನರನ್ನು ಆದ್ಯತೆ ಮೇರೆಗೆ ರಕ್ಷಣೆ ಮಾಡಲಾಗುತ್ತಿದೆ. ಸೇನೆ ಮತ್ತು ವಾಯು ದಳದ ಮೂರು ಹೆಲಿಕಾಪ್ಟರ್ ರಕ್ಷಣೆಗೆ ಬಂದಿವೆ. ಹೆಲಿಕಾಪ್ಟರ್ ಜೆತೆಗೆ ಸೇನಾ, ಎನ್.ಡಿ.ಆರ್.ಎಫ್ ಮತ್ತು ಅಗ್ನಿ ಶಾಮಕ ಸಿಬ್ಬಂದಿ ಬೋಟ್ ಮೂಲಕ ಕಾರ್ಯಾಚರಣೆ ನಡೆಯಲಿದೆ. ನಿನ್ನೆ ಹೆಲಿಕಾಪ್ಟರ್ ಮೂಲಕ ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ 32 ಜನರ ರಕ್ಷಣೆ ಮಾಡಲಾಗಿದೆ. ಇಂದು ಬೆಳಗಾವಿ ಜಿಲ್ಲೆಯ ಎಂಟು ಗ್ರಾಮದಲ್ಲಿ ಜನರನ್ನು ರಕ್ಷಿಸುವ ಕಾರ್ಯ ನಡೆಯಲಿದೆ.
ಸವದತ್ತಿ, ರಾಮದುರ್ಗ, ಗೋಕಾಕ, ಚಿಕ್ಕೋಡಿ ತಾಲೂಕಿನ ಗ್ರಾಮದಲ್ಲಿ ಸಿಲುಕಿರುವ ಜನರ ರಕ್ಷಣಾ ಕಾರ್ಯ ನಡೆಯಲಿದೆ ಎಂದರು.
ಇನ್ನೂ ಮಹಾರಾಷ್ಟ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರಲಿದೆ.
ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು. ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಆಗುವಂತೆ ಸೂಚನೆ ನೀಡಿದರು.
--
KN_BGM_07_9_Helicopter_Operation_DC_Byte_7201786

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.