ETV Bharat / state

ಕೆಎಲ್‌ಇ ಅಸ್ಪತ್ರೆಯಲ್ಲಿ ‌ಪೋಸ್ಟ್ ಕೋವಿಡ್ ಕೇರ್ ಸೆಂಟರ್ ‌ಉದ್ಘಾಟಿಸಿದ ಜಿಲ್ಲಾಧಿಕಾರಿ - ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ

ಕೊವಿಡ್ -19 ಗಂಭೀರ ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಆರೋಗ್ಯ ತೊಂದರೆ ಉಂಟಾಗದಂತೆ ಅನೇಕ ಕ್ರಮಗಳನ್ನು ಕೈಗೊಂಡು, ಪ್ರತ್ಯೇಕ ಘಟಕ ಸ್ಥಾಪಿಸಿ ಸುಮಾರು 1300ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ಹೆರಿಗೆ, ಹೃದಯ ಶಸ್ತ್ರಚಿಕಿತ್ಸೆ ಸೇರಿ ಅನೇಕ ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆಯನ್ನು ನೀಡಲಾಗಿದೆ..

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ
author img

By

Published : Sep 18, 2020, 6:20 PM IST

ಬೆಳಗಾವಿ: ನಗರದ ಕೆಎಲ್‍ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭಿಸಲಾದ ಪೊಸ್ಟ್ ಕೋವಿಡ್ ಕೇರ್ ಸೆಂಟರ್‌ನ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಇಂದು ಉದ್ಘಾಟಿಸಿದರು‌.

ಬಳಿಕ ಮಾತನಾಡಿದ ಅವರು, ಕೊರೊನಾ ಸೋಂಕನ್ನು ನಿಯಂತ್ರಿಸಲು ಕೆಎಲ್ಇ ಕಾರ್ಯ ಶ್ಲಾಘನೀಯ. ಜಿಲ್ಲಾಡಳಿತೊಂದಿಗೆ ಕೈಜೋಡಿಸಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಕೆಎಲ್ಇ ಹೆಚ್ಚಿನ ಆದ್ಯತೆ ನೀಡುತ್ತಿದೆ. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಉಲ್ಬಣಗೊಂಡಾಗ ಕೆಎಲ್‍ಇ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನೂತನ ಕಟ್ಟಡದಲ್ಲಿ ಕೋವಿಡ್ ವಾರ್ಡ್ ನಿರ್ಮಿಸಿದೆ. ಅಲ್ಲದೇ ಕೋವಿಡ್‌ರಹಿತ ಸಾಮಾನ್ಯ ರೋಗಿಗಳಿಗೆ ಮುಖ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಾ ಯಾವುದೇ ತೊಂದರೆ ಬಾರದಂತೆ ಅಗತ್ಯ ಕ್ರಮಕೈಗೊಂಡಿದೆ. ಕೆಎಲ್ಇ ಸದಾ ಜಿಲ್ಲಾಡಳಿತಕ್ಕೆ ಸಹಕರಿಸುತ್ತಾ ವೈದ್ಯಕೀಯ ಸೇವೆಗೆ ನಮ್ಮೊಂದಿಗೆ ಕೈಜೋಡಿಸಿದೆ ಎಂದರು.

ಸಂಸ್ಥೆಯ ಕಾರ್ಯಾದ್ಯಕ್ಷ ಡಾ. ಪ್ರಭಾಕರ ಕೋರೆ ಮಾತನಾಡಿ, ಕೊವಿಡ್ -19 ಗಂಭೀರ ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಆರೋಗ್ಯ ತೊಂದರೆ ಉಂಟಾಗದಂತೆ ಅನೇಕ ಕ್ರಮಗಳನ್ನು ಕೈಗೊಂಡು, ಪ್ರತ್ಯೇಕ ಘಟಕ ಸ್ಥಾಪಿಸಿ ಸುಮಾರು 1300ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ಹೆರಿಗೆ, ಹೃದಯ ಶಸ್ತ್ರಚಿಕಿತ್ಸೆ ಸೇರಿ ಅನೇಕ ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆಯನ್ನು ನೀಡಲಾಗಿದೆ.

ಈ ಭಾಗದ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ವೈದ್ಯಕೀಯ ಸೇವೆ ಕಲ್ಪಿಸಲು ಸದಾ ಕಾರ್ಯಪ್ರವೃತ್ತವಾಗಿದ್ದೇವೆ. ಸಾಮಾನ್ಯ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಹಜವಾಗಿ ಎಲ್ಲಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿವರಿಸಿದರು. ಈ ವೇಳೆ ಕೆಎಲ್‍ಇ ವಿವಿ ಕುಲಪತಿ ಡಾ. ವಿವೇಕ ಸಾವೋಜಿ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್ ಎಸ್ ಮಹಾಂತಶೆಟ್ಟಿ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ ವಿ ಜಾಲಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.