ETV Bharat / state

ಮಹಾರಾಷ್ಟ್ರ ಸಚಿವರು, ಸಂಸದರಿಗೆ ಬೆಳಗಾವಿ ಪ್ರವೇಶ ನಿಷೇಧಿಸಿ ಡಿಸಿ ಆದೇಶ

ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದರಿಗೆ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಕ್ಕೆ ನಿಷೇಧ ಹೇರಿ ಬೆಳಗಾವಿ ಡಿಸಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಡಿಸಿ ಆದೇಶ
ಡಿಸಿ ಆದೇಶ
author img

By

Published : Dec 5, 2022, 8:10 PM IST

ಬೆಳಗಾವಿ: ಮಂಗಳವಾರ ಬೆಳಗಾವಿಗೆ ಭೇಟಿ ನೀಡಲಿದ್ದ ಮಹಾರಾಷ್ಟ್ರ ಸರ್ಕಾರದ ಇಬ್ಬರು ಸಚಿವರು, ಓರ್ವ ಸಂಸದರಿಗೆ ಜಿಲ್ಲೆಯ ಗಡಿ ಪ್ರವೇಶಕ್ಕೆ ನಿಷೇಧ ವಿಧಿಸಿ ಡಿಸಿ ನಿತೇಶ ಪಾಟೀಲ್ ಆದೇಶಿಸಿದ್ದಾರೆ. ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ್, ಶಂಭುರಾಜ ದೇಸಾಯಿ ಹಾಗೂ ಮಹಾರಾಷ್ಟ್ರದ ಗಡಿ ತಜ್ಞ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆ ಅವರು ಜಿಲ್ಲೆ ಪ್ರವೇಶಿಸುವಂತಿಲ್ಲ ಎಂದು ಡಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ CRPC 1973 ಕಲಂ 144(3)ರ ಅನ್ವಯ ಅಧಿಕಾರ ಬಳಸಿ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ಕ್ರಮ ಜರುಗಿಸಲಾಗಿದೆ. ಭಾಷಾ ವೈಷಮ್ಯ ಬೆಳೆದು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರ ನೆಮ್ಮದಿಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಂಡು ಗಡಿ ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಗಡಿ‌ ಕನ್ನಡಿಗರ ಆಕ್ರೋಶಕ್ಕೆ ಮಣಿದು ತರಾತುರಿಯಲ್ಲಿ 'ಮಹಾ' ಸಚಿವರ ಭೇಟಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.