ಬೆಳಗಾವಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ನಿನ್ನೆ (ಗುರುವಾರ) ಬೆಳಗ್ಗೆ ರ‍್ಯಾಪಿಡ್ ಟೆಸ್ಟ್ ಮಾಡಿಸಿದ ವೇಳೆ ಕೋವಿಡ್ ಪಾಸಿಟಿವ್ ಬಂದಿದೆ. ಬಳಿಕ ಅವರು ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿದ್ದರು. ಆರ್ಟಿಪಿಸಿಆರ್ ವರದಿಯಲ್ಲಿಯೂ ಕೂಡ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಜಿಲ್ಲಾಧಿಕಾರಿಗಳಿಗೆ ಸೋಂಕು ದೃಢಪಟ್ಟ ಹಿನ್ನೆಲೆ ಮಹಾನಗರ ಪಾಲಿಕೆ ಸಿಬ್ಬಂದಿ ಡಿಸಿ ಚೇಂಬರ್ ಹಾಗೂ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿದರು.
ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಬೇಕೋ ಬೇಡವೋ ಎಂದು ಕೋವಿಡ್ ಸಭೆಯಲ್ಲಿ ಚರ್ಚಿಸಿ ನಿರ್ಧಾರ: ಸಿಎಂ ಬೊಮ್ಮಾಯಿ