ETV Bharat / state

ಮೂವರು ಕಂದಮ್ಮಗಳ ಸಾವು ಪ್ರಕರಣ: ತನಿಖೆಗೆ ಆದೇಶಿಸಿದ ಬೆಳಗಾವಿ ಡಿಎಚ್ಒ

ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರುಬೆಲ್ಲಾ ಚುಚ್ಚುಮದ್ದು ಪಡೆದಿದ್ದ ಮೂವರು ಮಕ್ಕಳು ಮೃತಪಟ್ಟಿರುವ ಪ್ರಕರಣವನ್ನು ಡಿಹೆಚ್‌ಒ ಡಾ.ಎಸ್.ವಿ.ಮುನ್ಯಾಳ್ ತನಿಖೆಗೆ ಆದೇಶಿಸಿದ್ದಾರೆ.

DHO orders for investigation
ಡಿಹೆಚ್‌ಒ ಡಾ.ಎಸ್.ವಿ.ಮುನ್ಯಾಳ್
author img

By

Published : Jan 16, 2022, 3:48 PM IST

ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದು ಮೂವರು ಕಂದಮ್ಮಗಳು ಮೃತಪಟ್ಟಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಾವಿನ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಡಿಹೆಚ್‌ಒ ಡಾ. ಎಸ್.ವಿ. ಮುನ್ಯಾಳ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ 12 ರಂದು 21 ಮಕ್ಕಳಿಗೆ ಲಸಿಕೆ ನೀಡಲಾಗಿತ್ತು. ಅದರಲ್ಲಿ ನಾಲ್ವರು ಮಕ್ಕಳಿಗೆ ದಡಾರ, ರುಬೆಲ್ಲಾ ವ್ಯಾಕ್ಸಿನ್ ನೀಡಲಾಗಿತ್ತು. ಆ ನಾಲ್ಕು ಮಕ್ಕಳಲ್ಲಿ ಪ್ರತಿಕೂಲ ಪರಿಣಾಮ ಕಾಣಿಸಿಕೊಂಡಿದೆ. ಬಳಿಕ ಅವರಿಗೆ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ಡಿಹೆಚ್‌ಒ ಡಾ.ಎಸ್.ವಿ.ಮುನ್ಯಾಳ್

ವಯಸ್ಕರಿಗೆ ಕೋವಿಡ್ ಹಾಗೂ ಮಕ್ಕಳಿಗೆ ಎಂಆರ್ ಲಸಿಕೆ ಒಂದೇ ಕೇಂದ್ರದಲ್ಲಿ ನೀಡಿದ ಆರೋಪವನ್ನು ಡಿಹೆಚ್‌ಒ ಡಾ.ಎಸ್‌. ವಿ. ಮುನ್ಯಾಳ ಅವರು ಅಲ್ಲಗಳೆದಿದ್ದಾರೆ. ಯಾವುದೇ ಲಸಿಕೆ ಪ್ರತಿಕೂಲ ಪರಿಣಾಮ ಬೀರಿದರೆ, ಆ ಬಗ್ಗೆ ಪರಿಶೀಲನೆಗೆ ಸಮಿತಿ ಇದೆ. ಆ ಸಮಿತಿಯ ವರದಿಯಂತೆ ಪ್ರಾಥಮಿಕವಾಗಿ ಲಸಿಕೆಯಿಂದ ಅಡ್ಡ ಪರಿಣಾಮ ಬೀರಿದ ಬಗ್ಗೆ ಮಾಹಿತಿ ಇದೆ.

ಇದನ್ನೂ ಓದಿ: ಬೆಳಗಾವಿ: ಮೂವರು ಕಂದಮ್ಮಗಳನ್ನು ಬಲಿ ಪಡೆದ ರೂಬೆಲ್ಲಾ ಚುಚ್ಚುಮದ್ದು

ಈಗಾಗಲೇ ಮೃತ ಮಕ್ಕಳ ರಕ್ತದ ಮಾದರಿ, ಮಲ-ಮೂತ್ರದ ಮಾದರಿ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದೇವೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಪರಿಶೀಲಿಸಿ ಕ್ರಮವಹಿಸುತ್ತೇವೆ. ಈಗಾಗಲೇ ಪ್ರಕರಣ ಕುರಿತು ತನಿಖೆಗೆ ಆದೇಶಿಸಿದ್ದೇವೆ. ಇದರಲ್ಲಿ ಯಾರೇ ಸಿಬ್ಬಂದಿ ತಪ್ಪು ಮಾಡಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಇನ್ನುಳಿದ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಮಾರಕ ರೋಗಗಳ ತಡೆಗೆ ನೀಡುವ ಎಲ್ಲ ಲಸಿಕೆಗಳನ್ನು ಮಕ್ಕಳಿಗೆ ಹಾಕಿಸಬೇಕು ಎಂದು ಡಿಹೆಚ್‌ಒ ಡಾ. ಎಸ್‌.ವಿ.ಮುನ್ಯಾಳ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.