ಬೆಳಗಾವಿ: ಕೇಂದ್ರ ಸರ್ಕಾರ ಇಂದು ಬಿಡುಗಡೆ ಮಾಡಿದ ಹಾಟ್ಸ್ಪಾಟ್ ಪಟ್ಟಿಯಲ್ಲಿ ಗಡಿ ಜಿಲ್ಲೆ ಬೆಳಗಾವಿ ಸೇರ್ಪಡೆಗೊಂಡಿದೆ.
ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ವೃದ್ಧೆಯನ್ನು ಬಲಿ ಪಡೆದಿದ್ದು, 18 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರು ಹಾಗೂ ಶಿವಮೊಗ್ಗ ಪ್ರಯೋಗಾಲಯಕ್ಕೆ ರಕ್ತ ಹಾಗೂ ಗಂಟಲು ದ್ರವದ ಮಾದರಿ ಕಳುಹಿಸಲಾಗಿದ್ದು, ಜಿಲ್ಲಾಡಳಿತ 178 ಶಂಕಿತರ ವರದಿಯ ನಿರೀಕ್ಷೆಯಲ್ಲಿದೆ.
ಜಿಲ್ಲೆಯಲ್ಲಿ 1,873 ಜನರ ಮೇಲೆ ನಿಗಾ ಇಡಲಾಗಿದ್ದು, 292 ಜನರಿಗೆ 14 ದಿನಗಳ ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. 58 ಜನರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಐಸೊಲೇಷನ್ ವಾರ್ಡ್ನಲ್ಲಿ ಇರಿಸಲಾಗಿದೆ. 664 ಜನರ 14 ದಿನಗಳ ಹೋಮ್ ಐಸೊಲೇಷನ್ ಹಾಗೂ 859 ಜನರಿಗೆ 28 ದಿನಗಳ ಹೋಮ್ ಐಸೊಲೇಷನ್ ಮುಗಿದಿದೆ.
ಬೆಳಗಾವಿ ಜಿಲ್ಲೆಯಿಂದ ಈವರೆಗೂ 572 ಜನರ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, 375 ಜನರ ವರದಿ ನೆಗೆಟಿವ್ ಬಂದಿದೆ.