ಬೆಳಗಾವಿ: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರೀಯ ರೈತ ಕಿಸಾನ್ ಮೋರ್ಚಾ ದೇಶಾದ್ಯಂತ ಕರೆ ನೀಡಿದ್ದ ಕರಾಳ ದಿನಾಚರಣೆಗೆ ಕುಂದಾನಗರಿಯಲ್ಲೂ ವಿವಿಧ ರೈತ ಸಂಘಟನೆ ಮುಖಂಡರು ಬೆಂಬಲ ನೀಡಿದ್ದಾರೆ.
ದೇಶದಾದ್ಯಂತ ಇಂದು ರಾಷ್ಟ್ರೀಯ ರೈತ ಸಂಘಟನೆಯು ಮನೆ, ವಾಹನಗಳು ಮತ್ತು ಅಂಗಡಿಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸುವ ಮೂಲಕ ಕೃಷಿ ಕಾನೂನುಗಳನ್ನು ವಿರೋಧಿಸುವ ಸಲುವಾಗಿ ಕರಾಳ ದಿನ ಆಚರಣೆ ಮಾಡುವಂತೆ ಕರೆ ನೀಡಿತ್ತು.
ಆ ನಿಟ್ಟಿನಲ್ಲಿ ಜಿಲ್ಲೆಯಲ್ಲೂ ವಿವಿಧ ರೈತಪರ ಸಂಘಟನೆಗಳ ಮುಖಂಡರು ಸಾಮಾಜಿಕ ಅಂತರ ಕಾಯ್ದುಕೊಂಡು ನಗರದ ಡಿಸಿ ಕಚೇರಿ ಎದುರಿಗೆ ಕುಳಿತು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಕರಾಳ ದಿನಾಚರಣೆಗೆ ಬೆಂಬಲ ಸೂಚಿಸಿದರು. ಬಂಡವಾಳಶಾಹಿಗಳ ಅನುಕೂಲಕ್ಕೆ ಮಾಡಿರುವಂತಹ ಕಾಯ್ದೆಗಳನ್ನು ತಕ್ಷಣವೇ ವಾಪಸ್ ಪಡೆದುಕೊಳ್ಳುವಂತೆ ರೈತರು ಆಗ್ರಹಿಸಿದರು.
ಇದನ್ನೂ ಓದಿ: ಕೋವಿಡ್ ಕೇರ್ ಸೆಂಟರ್ ಸ್ಥಾಪನೆಗೆ ಜಿಪಂ ಸದಸ್ಯ ಸಲ್ಲಿಸಿದ ಅರ್ಜಿ ತಿರಸ್ಕಾರ!