ಬೆಳಗಾವಿ : ವಿಧಾನ ಪರಿಷತ್‌ಗೆ ನಾಮ ನಿರ್ದೇಶನ ಮಾಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಬೆಳಗಾವಿ ಮೂಲದ ಹಿರಿಯ ಪತ್ರಕರ್ತ ಹಾಗೂ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಪರ ಲಾಬಿಯೂ ತೀವ್ರಗೊಂಡಿವೆ.
ಬೆಳಗಾವಿಯ ಕನ್ನಡ ಸಂಘಟನೆಗಳ ಕಾರ್ಯಕರ್ತರ ನಿಯೋಗವು ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿ ಡಿಸಿಎಂ ಗೋವಿಂದ ಕಾರಜೋಳ, ಗೃಹಸಚಿವ ಬಸವರಾಜ್ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಸಂಪುಟ ದರ್ಜೆಯ ಸಚಿವರಿಗೆ ಮನವಿ ಸಲ್ಲಿಸಿ ಅಶೋಕ ಚಂದರಗಿ ಅವರನ್ನು ಪರಿಷತ್ತಿಗೆ ನಾಮನಿರ್ದೇಶನ ಮಾಡುವಂತೆ ಆಗ್ರಹಿಸಿತ್ತು.
ಅಲ್ಲದೇ ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನ ಹಾಗೂ ನೇಕಾರ ಸಮುದಾಯಗಳ ಒಕ್ಕೂಟದ ಮುಖಂಡರು ಬೆಳಗಾವಿಯಲ್ಲಿ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ, ಶಾಸಕರಾದ ಮಹಾದೇವಪ್ಪ ಯಾದವಾಡ ಹಾಗೂ ಅನಿಲ್ ಬೆನಕೆ ಸೇರಿ ಜಿಲ್ಲೆಯ ರಾಜಕೀಯ ಮುಖಂಡರಿಗೆ ಮನವಿ ಸಲ್ಲಿಸಿ ಅಶೋಕ ಚಂದರಗಿ ಪರ ಲಾಬಿ ಮಾಡಿದ್ದಾರೆ ಎನ್ನಲಾಗ್ತಿದೆ.
ಅಶೋಕ್ ಚಂದರಗಿ ಅವರು ನೆಲ, ಜಲ, ಭಾಷೆಗೆ ಸಂಬಂಧಿಸಿದಂತೆ ಕಳೆದ ಎರಡು ದಶಕಗಳಿಂದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಇದಕ್ಕೂ ಮೊದಲು ಪತ್ರಕರ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.