ETV Bharat / state

ಮಾಸ್ಕ್ ಧರಿಸದೆ ಓಡಾಡಿದ್ರೆ ದಂಡ.. ಈಗ ಎಚ್ಚೆತ್ತ ಬೆಳಗಾವಿ ಮಹಾನಗರ ಪಾಲಿಕೆ - Government operation after the death of Union Minister Suresh angady

ನಗರದಲ್ಲಿ ಮಾಸ್ಕ್​ ಹಾಕದೇ ಸುತ್ತಾಡುವವರನ್ನು ಗುರುತಿಸಿ ಅವರಿಗೆ ದಂಡ ವಿಧಿಸಲಾಗುತ್ತಿದೆ. ಎರಡು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ 98 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ..

Belagavi municipality strict action against people without mask
ಸುರೇಶ ಅಂಗಡಿ ನಿಧನದ ಬಳಿಕ ಎಚ್ಚೆತ್ತ ಪಾಲಿಕೆ: ಮಾಸ್ಕ್ ಧರಿಸದೆ ಓಡಾಡುವವರಿಗೆ ದಂಡ!
author img

By

Published : Sep 26, 2020, 3:52 PM IST

ಬೆಳಗಾವಿ : ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಕೊರೊನಾಗೆ ಬಲಿಯಾದ ಹಿನ್ನೆಲೆ ಎಚ್ಚೆತ್ತ ಮಹಾನಗರ ಪಾಲಿಕೆ ಅಧಿಕಾರಿಗಳು ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸುತ್ತಿದ್ದಾರೆ.

Belagavi municipality strict action against people without mask
ಕೇಂದ್ರ ಸಚಿವ ಸುರೇಶ ಅಂಗಡಿ ನಿಧನದ ಬಳಿಕ ಎಚ್ಚೆತ್ತ ಪಾಲಿಕೆ

ಮಾಸ್ಕ್ ಧರಿಸದೆ ಓಡಾಡುವವರಿಗೆ ದಂಡ!

ಬೆಳಗಾವಿಯಲ್ಲಿ ಕೊರೊನಾ ಹಬ್ಬುತ್ತಿದೆ. ಅಲ್ಲದೇ ಸೋಂಕಿಗೆ ಎರಡು ದಿನಗಳ ಹಿಂದೆ ಸಚಿವರಾಗಿದ್ದ ಸುರೇಶ ಅಂಗಡಿ ಅವರೂ ಬಲಿಯಾಗಿದ್ದಾರೆ. ಹೀಗಾಗಿ, ಕೊರೊನಾ ನಿಯಂತ್ರಿಸಲು ಮಹಾನಗರ ಪಾಲಿಕೆ ಮಹತ್ವದ ಕಾರ್ಯಾಚರಣೆ ನಡೆಸುತ್ತಿದೆ.

ಮಹಾನಗರದಲ್ಲಿ ಮಾಸ್ಕ್​ ಹಾಕದೇ ಸುತ್ತಾಡುವವರನ್ನು ಗುರುತಿಸಿ ಅವರಿಗೆ ದಂಡ ವಿಧಿಸಲಾಗುತ್ತಿದೆ. ಎರಡು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ 98 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಪಾಲಿಕೆಯ ಆರೋಗ್ಯ ವಿಭಾಗ, ಕಂದಾಯ ಅಧಿಕಾರಿಗಳು ಹಾಗೂ ಸೆಕ್ಷನ್ ಅಧಿಕಾರಿಗಳ ತಂಡ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ದಂಡ ವಸೂಲಿ ಮಾಡುತ್ತಿದ್ದಾರೆ.

ನಗರದಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳು ಮಾಸ್ಕ್​ ಹಾಕಿಕೊಳ್ಳದೆ ಸುತ್ತಾಡಿದರೆ ದಂಡ ಹಾಕಲಾಗುತ್ತಿದೆ. ಜನರಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ದಂಡ ವಸೂಲಿ ಮಾಡಲಾಗುತ್ತಿದೆ. ಎಲ್ಲರೂ ಮಾಸ್ಕ್ ಧರಿಸಿ ಮಹಾಮಾರಿ ಕೋವಿಡ್‌ನಿಂದ ರಕ್ಷಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.