ETV Bharat / state

ಸಾರಿಗೆ ಸೇವೆಯನ್ನು ಲಾಭದಾಯಕವಾಗಿಸಲು ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - Karnataka Transportation service

ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣ ಉದ್ಘಾಟನೆ - ಖಾಸಗಿ ಸಾರಿಗೆಗೆ ಪೈಪೋಟಿ ನೀಡುವಂತೆ ಸಾರಿಗೆ ಸಂಸ್ಥೆಗಳಲ್ಲಿ ಸುಧಾರಣೆ - ಬರುವ ಬಜೆಟ್‌ನಲ್ಲಿ 500 ಬಸ್ ಖರೀದಿ ಕುರಿತು ಚರ್ಚೆ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Basavaraj Bommai
ಬಸವರಾಜ ಬೊಮ್ಮಾಯಿ
author img

By

Published : Dec 28, 2022, 8:59 AM IST

ಬೆಳಗಾವಿ: ರಾಜ್ಯ ರಸ್ತೆ ಸಾರಿಗೆ ಇಲಾಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸಾರಿಗೆ ಸೇವೆಯನ್ನು ಲಾಭದಾಯಕವಾಗಿ ಮಾಡಲು ಕ್ರಮ ವಹಿಸಲಾಗುವುದು ಮತ್ತು ಖಾಸಗಿ ಸಾರಿಗೆಗೆ ಪೈಪೋಟಿ ನೀಡುವಂತೆ ಸಾರಿಗೆ ಸಂಸ್ಥೆಗಳಲ್ಲಿ ಸುಧಾರಣೆ ತರಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಅವರು, ಕೆಎಸ್​ಆರ್​ಟಿಸಿ ಸುಧಾರಣೆಗಾಗಿ ನಿವೃತ್ತ ಅಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ವರದಿ ಕೊಟ್ಟಿದೆ. ವರದಿಯ ಅನುಷ್ಠಾನದ ಜವಾಬ್ದಾರಿಯನ್ನು ಸಹ ಅವರಿಗೆ ನೀಡಲಾಗಿದೆ. ಸಾರಿಗೆ ಸೇವೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಿ, ಅನಾವಶ್ಯಕ ವೆಚ್ಚಗಳಿಗೆ ಕಡಿವಾಣ ಹಾಕಲಾಗುವುದು. ರಾಜ್ಯದ ರಸ್ತೆ ಸಾರಿಗೆಯ ವಿವಿಧ ಸಂಸ್ಥೆ, ಬಿಎಂಟಿಸಿ ಸೇರಿದಂತೆ ಸರ್ಕಾರಿ ಸಾರಿಗೆ ಸೇವೆಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆಗಳನ್ನು ಕಾಣಲಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಹೊಸ ಯೋಜನೆ ಘೊಷಣೆ ಮಾಡಲು ಚರ್ಚಿಸಲಾಗುವುದು. ವಾಯುವ್ಯ ಸಾರಿಗೆ ಬೆಳ್ಳಿ ಹಬ್ಬ ಆಚರಿಸಲಿದ್ದು, ಬರುವ ಬಜೆಟ್‌ನಲ್ಲಿ 500 ಬಸ್ ಖರೀದಿಗೆ ಹಾಗೂ 500 ಸಿಬ್ಬಂದಿ ‌ನೇಮಕ ಮಾಡಲು ಅನುಮತಿ ನೀಡುವ ಬಗ್ಗೆ ಚರ್ಚಿಸಲಾಗುವುದು ಎಂದರು.

2 ವರ್ಷದಲ್ಲಿ 2000 ಕೋಟಿ ರೂ. ಆರ್ಥಿಕ ನೆರವು: ಕರ್ನಾಟಕ ಸಾರಿಗೆ ಸೇವೆ ಒಳ್ಳೆಯ ಸೇವೆ ಕೊಡುತ್ತಾ ಬಂದಿದೆ. ಕೋವಿಡ್ ಸಂದರ್ಭದಲ್ಲಿ ಸಂಸ್ಥೆಗೆ ಆರ್ಥಿಕ ನಷ್ಟವುಂಟಾಗಿದೆ. ಸರ್ಕಾರವು 2 ವರ್ಷದಲ್ಲಿ ಸಾರಿಗೆ ಸಂಸ್ಥೆಗೆ 2000 ಕೋಟಿ ಆರ್ಥಿಕ ನೆರವು ನೀಡಿದೆ. ಸಾರಿಗೆಯ ವಿವಿಧ ಸಂಸ್ಥೆಗಳಿಗೆ ಬಸ್ ಖರೀದಿಗೆ ಅನುದಾನ ಮತ್ತು ಸಾಲ ಪಡೆಯಲು ಅನುಮತಿ ನೀಡಲಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಗ್ರಾಮೀಣ ಪ್ರದೇಶದ ಜನರಿಗೆ , ಬಡ ಮಕ್ಕಳಿಗೆ ಸೇವೆ ಸಲ್ಲಿಸುತ್ತಿವೆ. ಕಾಲಕಾಲಕ್ಕೆ ಸರ್ಕಾರ ಈ ಸಂಸ್ಥೆಗಳಿಗೆ ಸಹಾಯ ಒದಗಿಸುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಶೀಘ್ರವೇ ವಿಶ್ವ ಕನ್ನಡ ಸಮ್ಮೇಳನ.. ರಾಜಕೀಯಕ್ಕಾಗಿ ಗಡಿ ಸಮಸ್ಯೆ ಸೃಷ್ಟಿ: ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ ಟಾಂಗ್​

ನವೀಕೃತ ಬಸ್ ನಿಲ್ದಾಣಕ್ಕೆ 30 ಕೋಟಿ ವೆಚ್ಚ: ಬೆಳಗಾವಿ ಬಸ್ ನಿಲ್ದಾಣ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಕಾಲದಲ್ಲಿ ಅತ್ಯಂತ ಸುವ್ಯವಸ್ಥಿತ ಸುಧಾರಣೆಯಾಗುತ್ತಿದೆ. ಬೆಳಗಾವಿ ಬಸ್ ನಿಲ್ದಾಣ ಎಲ್ಲಾ ಕಡೆ ಸಂಪರ್ಕ ಕಲ್ಪಿಸುವ ಕೇಂದ್ರ. ಇದು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಾಣಿಜ್ಯ ನಗರ. ಸುತ್ತಲಿನ ನಗರಗಳನ್ನು ಇಲ್ಲಿಗೆ ಸಂಪರ್ಕ ಕಲ್ಪಿಸಲಾಗಿದೆ. ಸುಮಾರು 30 ಕೊಟಿ ರೂ. ವೆಚ್ಚದಲ್ಲಿ ನವೀಕೃತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಈ ಬಸ್ ನಿಲ್ದಾಣದಿಂದ ಪ್ರಯಾಣಕರಿಗೆ ಅನುಕೂಲವಾಗಬೇಕು.ಇದರ ಸೇವೆ ಸದುಪಯೋಗವಾಗಲಿ ಎಂದರು.

ಇದನ್ನೂ ಓದಿ: ಗಡಿ ವಿವಾದ: ಬಸ್​ ಸಂಚಾರ ಸ್ಥಗಿತ, ಗಡಿಯಲ್ಲಿ ರೋಗಿಗಳ ಪರದಾಟ

ಬೆಂಗಳೂರಿನ ರೈಲು ನಿಲ್ದಾಣಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಬೈಯಪ್ಪನಹಳ್ಳಿ ನಿಲ್ದಾಣ ಅತಿ ದೊಡ್ಡ ರೈಲು ನಿಲ್ದಾಣವಾಗಿದೆ. ವಂದೇ ಭಾರತ ಎಂಬ ಹೈ ಸ್ಪೀಡ್ ರೈಲನ್ನು ಪ್ರಾರಂಭಿಸಲಾಗಿದ್ದು, ಬೆಂಗಳೂರಿನಿಂದ ಹುಬ್ಬಳ್ಳಿ, ಬೆಳಗಾವಿಗೆ ಮಾರ್ಗವನ್ನು ವಿಸ್ತರಿಸುವ ಯೋಜನೆ ಇದೆ ಎಂದರು.

ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಸಂಸದೆ ಮಂಗಳಾ ಅಂಗಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕೈಮುಗಿದು ಏರು ಇದು ಕನ್ನಡದ ತೇರು.. ಈ ಬಸ್​ ನಿರ್ವಾಹಕನ ಮಾತೃಭಾಷೆ ಪ್ರೇಮಕ್ಕೆ ವಂದನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.