ಬೆಳಗಾವಿ: ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ರೌಡಿಶೀಟರ್ಗಳ ವಿರುದ್ದ ಕಾರ್ಯಾಚರಣೆಗೆ ಇಳಿದ ಪೊಲೀಸರು ಅವರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. 26ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ ನಡೆಸಿ ಮನೆಯಲ್ಲಿ ಅಡಗಿಸಿಟ್ಟಿದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಡಲು ಡಿಸಿಪಿ ರವೀಂದ್ರ ಗಡಾದೆ ನೇತೃತ್ವದಲ್ಲಿ 150ಕ್ಕೂ ಹೆಚ್ಚು ಪೋಲಿಸರು ಏಕಕಾಲದಲ್ಲಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ವೇಳೆ, ರೌಡಿಶೀಟರ್ಗಳಾದ ಶ್ರೀಧರ ತಳವಾರ(29) ವಿನಯ್ ಪ್ರಧಾನ(45) ಅಲ್ತಾಪ್ ಸುಭೇದಾರ(36) ಮನೆಯಲ್ಲಿ ತಲವಾರ್, ಚಾಕು ಸೇರಿದಂತೆ ವಿವಿಧ ಮಾರಕಾಸ್ತ್ರಗಳು ಪತ್ತೆಯಾಗಿವೆ.
ನಗರದಲ್ಲಿ ದುಡ್ಡಿಗಾಗಿ ಜನರಿಗೆ ಹೆದರಿಸಿ ಸುಲಿಗೆ ಮಾಡುತ್ತಿದ್ದರು ಎನ್ನಲಾಗಿದ್ದು, ಹಣ ಕೊಡದೇ ಹೋದಲ್ಲಿ ಅವರ ಮೇಲೆ ಹಲ್ಲೆ ಮಾಡುತ್ತಿದ್ದರಂತೆ. ಅಲ್ಲದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಜೈಲು ಶಿಕ್ಷೆ ಪೂರ್ಣಗೊಳಿಸಿ ಬಂದ್ರು ಮತ್ತದೇ ಕೃತ್ಯ.. ನಾಲ್ವರು ಚಾಲಾಕಿ ಕಳ್ಳರು ಅಂದರ್